HomeKarnatakaBIGG NEWS : ಶೀಘ್ರ ನ್ಯಾಯದಾನ ವ್ಯವಸ್ಥೆಗಾಗಿ ರಾಜ್ಯದ `ಸಿವಿಲ್ ಪ್ರೊಸೀಜರ್ ಕೋಡ್’ ತಿದ್ದುಪಡಿ :...

BIGG NEWS : ಶೀಘ್ರ ನ್ಯಾಯದಾನ ವ್ಯವಸ್ಥೆಗಾಗಿ ರಾಜ್ಯದ `ಸಿವಿಲ್ ಪ್ರೊಸೀಜರ್ ಕೋಡ್’ ತಿದ್ದುಪಡಿ : ಕಾನೂನು ಸಚಿವ ಹೆಚ್.ಕೆ.ಪಾಟೀಲ್

ಉಡುಪಿ : ರಾಜ್ಯದಲ್ಲಿ ಕಕ್ಷಿದಾರರಿಗೆ ಶೀಘ್ರದಲ್ಲಿ ನ್ಯಾಯದಾನ ವ್ಯವಸ್ಥೆ ತಲುಪಿಸುವ ಉದ್ದೇಶದಿಂದ ರಾಜ್ಯದ ಸಿವಿಲ್ ಪ್ರೊಸೀಜರ್ ಕೋಡ್ ತಿದ್ದುಪಡಿ ಮಾಡಲು ವಿಧಾನಸಭೆಯ 2 ಸದನಗಳಲ್ಲಿ ಅನುಮೋದನೆ ಪಡೆದಿದ್ದು, ಇದನ್ನು ರಾಷ್ಟçಪತಿಗಳ ಅಂಕಿತಕ್ಕಾಗಿ ಸಲ್ಲಿಸಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದರು.

ಅವರು ಇಂದು ಜಿಲ್ಲಾ ನ್ಯಾಯಾಂಗ ಉಡುಪಿ, ಲೋಕೋಪಯೋಗಿ ಇಲಾಖೆ ಉಡುಪಿ ಮತ್ತು ವಕೀಲರ ಸಂಘ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರದಲ್ಲಿ ನೂತನವಾಗಿ ಸೃಜಿಸಲ್ಪಟ್ಟ ಬ್ರಹ್ಮಾವರ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

  ವಿಳಂಬ ನ್ಯಾಯದಾನ ನ್ಯಾಯವನ್ನು ನಿರಾಕರಿಸಿದಂತೆ ಎಂಬ ಮಾತಿದೆ. ಕಕ್ಷಿದಾರರಿಗೆ ಶೀಘ್ರದಲ್ಲಿ ನ್ಯಾಯ ಒದಗಿಸುವ ಉದ್ದೇಶದಿಂದ ರಾಜ್ಯದ ಸಿವಿಲ್ ಪ್ರೊಸೀಜರ್ ಕೋಡ್ ತಿದ್ದುಪಡಿ ಮಾಡಲಾಗಿದ್ದು, ಇದರನ್ವಯ 6 ತಿಂಗಳ ಒಳಗೆ ವ್ಯಾಜ್ಯಗಳನ್ನ ವಿಲೇವಾರಿ ಮಾಡುವ ಹಾಗೂ ಪ್ರಕರಣಗಳನ್ನು 3 ಕ್ಕಿಂತ ಹೆಚ್ಚು ಬಾರಿ ಮುಂದೂಡದAತೆ ತಿದ್ದುಪಡಿ ಮಾಡಲಾಗಿದ್ದು, ಇದಕ್ಕೆ ಶೀಘ್ರದಲ್ಲಿ ರಾಷ್ಟçಪತಿಗಳ ಅಂಕಿತ ದೊರೆಯಲಿದೆ ಎಂದರು.

   ಪ್ರಸ್ತುತ ಅನೇಕ ಸೇವೆಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದ್ದು, ನ್ಯಾಯದಾನ ವ್ಯವಸ್ಥೆಯನ್ನೂ ಸಹ ಸಾರ್ವಜನಿಕರ ಮನೆ ಬಾಗಲಿಗೆ ತಲುಪಿಸಿ, ಶೀಘ್ರ ಮತ್ತು ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಿಸುವ ಉದ್ದೇಶದಿಂದ ಇದೇ ವರ್ಷ ರಾಜ್ಯದಲ್ಲಿ ಗ್ರಾಮ ನ್ಯಾಯಾಲಯಗಳನ್ನು ಆರಂಭಿಸಲಾಗುತ್ತಿದ್ದು,  2 ರಿಂದ 3 ಪಂಚಾಯತ್ಗಳಿಗೆ ಒಂದರAತೆ 2000 ಗ್ರಾಮ ನ್ಯಾಯಾಲಯಗಳನ್ನು ರಾಜ್ಯಾದ್ಯಂತ ಹಂತಹAತವಾಗಿ ಆರಂಭಿಸಲಾಗುವುದು ಎಂದರು.

  ರಾಜ್ಯದಲ್ಲಿ ವ್ಯಾಜ್ಯ ಮುಕ್ತ ಗ್ರಾಮಗಳನ್ನು ನಿರ್ಮಾಣ ಮಾಡುವ ಕಲ್ಪನೆ ಇದ್ದು, ಪ್ರತೀ ಗ್ರಾಮದಲ್ಲಿ ಕನಿಷ್ಠ ಇಬ್ಬರು ಉತ್ತಮ ಕೌನ್ಸಲಿಂಗ್ ಮಾಡುವ ವ್ಯಕ್ತಿಗಳಿದ್ದಲ್ಲಿ ಇದು ಸಾಧ್ಯವಾಗಲಿದೆ. ಸುಪ್ರೀಂಕೋರ್ಟ್ನಿAದ ಕೆಳ ನ್ಯಾಯಾಲಯಗಳ ವರೆಗೆ ಅನೇಕ ಪ್ರಕರಣಗಳು ಅವಧಿ ಮೀರಿದ್ದರೂ  ಇತ್ಯರ್ಥಗೊಂಡಿಲ್ಲ. ವಕೀಲರು ಆದಷ್ಟು ಶೀಘ್ರದಲ್ಲಿ ಕಕ್ಷಿದಾರರಿಗೆ ನ್ಯಾಯ ದೊರಕಿಸಬೇಕು. ವ್ಯಾಜ್ಯಗಳು ಬೇಗ ಇತ್ಯರ್ಥಗೊಂಡಲ್ಲಿ ಸಮಾಜದಲ್ಲಿ ಸಂತೋಷ ಸಮಾಧಾನ ನೆಲೆಗೊಳ್ಳಲಿದೆ ಎಂದರು.

   ಬ್ರಹ್ಮಾವರದಲ್ಲಿ ಪ್ರಸ್ತುತ ನೂತನವಾಗಿ ಸೃಜಿಸಲ್ಪಟ್ಟ ಬ್ರಹ್ಮಾವರ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಬದಲು ಖಾಯಂ ನ್ಯಾಯಾಲಯ ಆರಂಭಿಸುವ ಬಗ್ಗೆ ಮನವಿ ಬಂದಿದ್ದು, ಈ ಕುರಿತು ನ್ಯಾಯಾಂಗ ಇಲಾಖೆ ಮೂಲಕ ಅಗತ್ಯ ಕಡತ ಸಲ್ಲಿಕೆಯಾದಲ್ಲಿ 48 ಗಂಟೆಯೊಳಗೆ ಅನುಮತಿ ನೀಡಲಾಗುವುದು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular