ಬೆಂಗಳೂರು : ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಯಾರು ನಿರೀಕ್ಷೆ ಮಾಡಿರಲಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ವಿಧಿವಶರಾಗಿದ್ದು, ಈ ಬಗ್ಗೆ ಸಂತಾಪ ಸೂಚಿಸಿ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದಾರೆ. ಸ್ಪಂದನಾ ಅವರ ಕುಟುಂಬದವರೂ ನಿರೀಕ್ಷೆ ಮಾಡಿರಲಿಲ್ಲ. ಇದೊಂದು ಆಘಾತಕಾರಿ ಘಟನೆ ಎಂದಿದ್ದಾರೆ.
ಕೋವಿಡ್ ನಂತರ ಹೃದಯಾಘಾತದ ಘಟನೆಗಳು ಹೆಚ್ಚಳವಾಗುತ್ತಿರುವುದು ಆತಂಕಕಾರಿಯಾಗಿದೆ.
ಕೋವಿಡ್ ಬಳಿಕ ಕೆಲವು ಮನುಷ್ಯನ ದೇಹದ ಮೇಲೆ ಆಗಿರುವ ಸಮಸ್ಯೆಗಳಿಂದ ಇಂತಹ ಘಟನೆ ನಡೆಯುತ್ತಿದೆ. ಪ್ರತಿಯೊಬ್ಬರೂ ಆರೋಗ್ಯದ ಎಚ್ಚರಿಕೆ ವಹಿಸಿ. ಆಗಾಗ ಆಸ್ಪತ್ರೆಗೆ ತೆರಳಿ ಚೆಕಪ್ ಮಾಡಿಸಿಕೊಳ್ಳಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದು , ಬ್ಯಾಂಕಾಕ್ ನಿಂದ ನಾಳೆ ಬೆಂಗಳೂರಿಗೆ ಪಾರ್ಥಿವ ಶರೀರ ಆಗಮಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.