ಬೆಂಗಳೂರು : ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯಜಿಲ್ಲೆಯ ಮಂಡ್ಯ, ಮಳವಳ್ಳಿ, ಕೆ.ಆರ್. ಪೇಟೆ, ಪಾಂಡವಪುರ, ಶ್ರೀರಂಗಪಟ್ಟಣ, ನಾಗಮಂಗಲ, ಮದ್ದೂರು ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎನ್ನಲಾಗಿತ್ತು.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ತನಿಖೆ ನಡೆಸೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಪಾಪ ಅವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ. ನಾವು ಮಂಡ್ಯದಲ್ಲಿ ಏಳಕ್ಕೆ ಆರು ಗೆದ್ದುಬಿಟ್ಟಿದ್ದೀವಲ್ಲ ಅದಕ್ಕಾಗಿ ಸಹಿಸಿಕೊಳ್ಳಲು ಆಗ್ತಿಲ್ಲ ಎಂದು ಹೆಚ್ಡಿಕೆ ವಿರುದ್ಧ ಕಿಡಿಕಾರಿದರು. ಕೃಷಿ ಅಧಿಕಾರಿಗಳಿಂದ ರಾಜ್ಯಪಾಲರಿಗೆ ದೂರು ವಿಚಾರವಾಗಿ ತನಿಖೆ ನಡೆಸೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯಜಿಲ್ಲೆಯ ಮಂಡ್ಯ, ಮಳವಳ್ಳಿ, ಕೆ.ಆರ್. ಪೇಟೆ, ಪಾಂಡವಪುರ, ಶ್ರೀರಂಗಪಟ್ಟಣ, ನಾಗಮಂಗಲ, ಮದ್ದೂರು ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎನ್ನಲಾಗಿತ್ತು. ಸಚಿವ ಚಲುವರಾಯಸ್ವಾಮಿ ಅವರು 6 ರಿಂದ 8 ಲಕ್ಷ ರೂ.ವರೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.