HomeKarnatakaಕಾನೂನು ವಿದ್ಯಾರ್ಥಿ ಆತ್ಮಹತ್ಯೆ

ಕಾನೂನು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಕಾನೂನು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.

23 ವರ್ಷದ ಆರ್ಯಕುಮಾರ್ ನಡ್ಡಾ ಮೃತ ವಿದ್ಯಾರ್ಥಿ. ನಗರದ ಖಾಸಗಿ ಕಾಲೇಜಿನಲ್ಲಿ ಕಾನೂನು ವಿದ್ಯಾಭ್ಯಾಸ ಮಾಡುತ್ತಿದ್ದ. ಅನ್ನಪೂರ್ಣೇಶ್ವರಿ ನಗರದಲ್ಲಿ ಪಿಜಿಯಲ್ಲಿ ವಾಸವಾಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಜಿಯಲ್ಲಿ ಯಾರೂ ಇಲ್ಲದಿರುವಾಗ ಆರ್ಯಕುಮಾರ್ ತಾನಿದ್ದ ರೂಮಿನಲ್ಲಿಯೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ನೇಹಿತರು ಪಿಜಿಗೆ ಬಂದು ಬಾಗಿಲು ತೆಗಿದಾಗಲೇ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular