HomeKarnatakaBIG NEWS: ಮತ್ತೆ ವಿದೇಶಕ್ಕೆ ಹಾರಿದ ಮಾಜಿ ಸಿಎಂ ಕುಮಾರಸ್ವಾಮಿ; ಈ ಬಾರಿ ರಾಜಕೀಯ ನಾಯಕರೂ...

BIG NEWS: ಮತ್ತೆ ವಿದೇಶಕ್ಕೆ ಹಾರಿದ ಮಾಜಿ ಸಿಎಂ ಕುಮಾರಸ್ವಾಮಿ; ಈ ಬಾರಿ ರಾಜಕೀಯ ನಾಯಕರೂ ಸಾಥ್

ಬೆಂಗಳೂರು: ನಾಲ್ಕು ದಿನಗಳ ಹಿಂದಷ್ಟೇ ವಿದೇಶ ಪ್ರವಾಸ ಮುಗಿಸಿ ವಾಪಸ್ ಆಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ವಿದೇಶಕ್ಕೆ ಹಾರಿದ್ದಾರೆ.

ಇತ್ತೀಚೆಗಷ್ಟೇ ಕುಟುಂಬ ಸಮೇತರಾಗಿ ಯುರೋಪ್ ಪ್ರವಾಸ ಮುಗಿಸಿ ಬಂದಿದ್ದ ಕುಮಾರಸ್ವಾಮಿ ಈಗ ಮಲೇಶಿಯಾಗೆ ತೆರಳಿದ್ದಾರೆ. ನಿನ್ನೆ ರಾತ್ರಿ ಕುಮಾರಸ್ವಾಮಿ ತಮ್ಮ ಆಪ್ತರ ಜೊತೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೌಲಾಲಂಪುರಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ಕುಮಾರಸ್ವಾಮಿಗೆ ವಿದೇಶ ಪ್ರವಾಸಕ್ಕೆ ಮಾಜಿ ಸಚಿವ ಸಾ.ರಾ.ಮಹೇಶ್, ಪರಿಷತ್ ಸದಸ್ಯ ರಮೇಶ್ ಗೌಡ ಸೇರಿದಂತೆ ಐವರು ಸಾಥ್ ನೀಡಿದ್ದಾರೆ. ಕಳೆದ ಬಾರಿ ಕುಮಾರಸ್ವಾಮಿ ವಿದೇಶ ಪ್ರವಾಸದ ಬಗ್ಗೆ ಸರ್ಕಾರ ಉರುಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದ್ದರು. ಈಬಾರಿ ರಾಜಕೀಯ ನಾಯಕರೊಂದಿಗೆ ವಿದೇಶ ಪ್ರವಾಸಕ್ಕೆ ಕುಮರಸ್ವಾಮಿ ತೆರಳಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular