alex Certify ಗಮನಿಸಿ : ಹೊಸದಾಗಿ ರೇಷನ್ ಕಾರ್ಡ್ ಮಾಡಿಸಲು ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಹೊಸದಾಗಿ ರೇಷನ್ ಕಾರ್ಡ್ ಮಾಡಿಸಲು ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ

ಬೆಂಗಳೂರು: ಸರ್ಕಾರದ ಎಲ್ಲಾ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಪಡಿತರ ಚೀಟಿ ಬಹಳ ಮುಖ್ಯದ್ದಾಗಿದೆ. ಹೊಸದಾಗಿ ರೇಷನ್ ಕಾರ್ಡ್ ಮಾಡಿಸಬೇಕು ಅಂದುಕೊಂಡಿದ್ದೀರಾ..ಹಾಗಾದ್ರೆ ಇದಕ್ಕೆ ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದಾಗಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ವಿತರಣೆ ಸ್ಥಗಿತಗೊಳಿಸಲಾಗಿತ್ತು. ವೆಬ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ ಮಾಡಲಾಗಿತ್ತು. ಮುಂದಿನ ವಾರದಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲು ತೆರೆಯಲಾಗುವುದು. ಬಿಪಿಎಲ್ ಕಾರ್ಡ್ ಗಾಗಿ ಚುನಾವಣೆಗಿಂತ ಮೊದಲು 2.94 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಇವುಗಳ ಪರಿಶೀಲನೆ ನಡೆಸಲಾಗುತ್ತಿದೆ.ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಗ್ರಾಪಂ ಕಚೇರಿಗಳಲ್ಲಿ ಲಭ್ಯವಿರುವ ಗಣಕೀಕರಣ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬೇಕು.

ಬೇಕಾಗುವ ದಾಖಲೆಗಳು
ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಬೇಕು.
6 ವರ್ಷದ ಒಳಗಿನ ಮಕ್ಕಳನ್ನು ಹೊರತುಪಡಿಸಿ ಕುಟುಂಬದ ಎಲ್ಲಾ ಸದಸ್ಯರ ಬಯೋಮೆಟ್ರಿಕ್
ಕುಟುಂಬದ ಸದಸ್ಯರೊಬ್ಬರ ಮೊಬೈಲ್ ಸಂಖ್ಯೆ / ಇ-ಮೇಲ್ ಐಡಿ ಬೇಕು.

ಕುಟುಂಬದ ಒಬ್ಬ ಸದಸ್ಯರ ಹೆಸರಿನಲ್ಲಿ ಆದಾಯ ಪ್ರಮಾಣ ಪತ್ರ ಬೇಕು
ಮನೆಯಲ್ಲಿ ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿದ್ದಲ್ಲಿ ಅವರ ಜನನ ಪ್ರಮಾಣ ಪತ್ರ
ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ (ಸ್ಕ್ಯಾನ್ ಮಾಡಿದ ಪ್ರತಿ) ನಂತಹ ವಾಸಸ್ಥಳದ ಪುರಾವೆಗಳು
ವಯಸ್ಸಿನ ಪ್ರಮಾಣಪತ್ರ (ಸ್ಕ್ಯಾನ್ ಮಾಡಿದ ಪ್ರತಿ)ಮತದಾರರ ಗುರುತಿನ ಪತ್ರ (ವೋಟರ್ ಐಡಿ), ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ (ಸ್ಕ್ಯಾನ್ ಮಾಡಿದ ಪ್ರತಿ) ನಂತಹ ಗುರುತಿನ ಪುರಾವೆ
ಕುಟುಂಬದ ಆದಾಯ ಪ್ರಮಾಣ ಪತ್ರ (ಸ್ಕ್ಯಾನ್ ಮಾಡಿದ ಪ್ರತಿ)ಅರ್ಜಿದಾರರ ಇತ್ತೀಚಿನ ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ / ಇ-ಮೇಲ್ ಐಡಿ ಹಾಗೂ ವಾರ್ಡ್ ಕೌನ್ಸಿಲರ್/ ಪ್ರಧಾನ್ ನೀಡಿದ ಸ್ವಯಂ ಘೋಷಣೆ ಮತ್ತು ಪ್ರಮಾಣಪತ್ರ

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ.

ಮಾನದಂಡಗಳು

ಕರ್ನಾಟಕದಲ್ಲಿ ಖಾಯಂ ನಿವಾಸಿಯಾಗಿರಬೇಕು.
ರಾಜ್ಯದಲ್ಲಿ ಈಗಾಗಲೇ ಪಡಿತರ ಚೀಟಿ ಹೊಂದಿರದ ಕುಟುಂಬಗಳು ಅರ್ಹರಾಗಿರುತ್ತಾರೆ.
ಹೊಸದಾಗಿ ಮದುವೆಯಾದ ದಂಪತಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು.
ದಿನಾಂಕ ಮುಗಿದ ತಾತ್ಕಾಲಿಕ ಪಡಿತರ ಚೀಟಿ ಹೊಂದಿರುವ ನಾಗರಿಕರು ಅರ್ಹರು.
ಕರ್ನಾಟಕದಲ್ಲಿ ಹೊಸ ಪಡಿತರ ಚೀಟಿ ನೀಡುವಿಕೆಯು ಮನೆಯ ಆದಾಯ ಮತ್ತು ಕುಟುಂಬದ ಆರ್ಥಿಕ ಪರಿಸ್ಥಿತಿಗಳನ್ನು ಆಧರಿಸಿದೆ ಎಂಬುದನ್ನು ಗಮನಿಸುವುದು ಮುಖ್ಯವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...