HomeIndiaIIT ಕ್ಯಾಂಪಸ್ ನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ; ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪತ್ತೆ

IIT ಕ್ಯಾಂಪಸ್ ನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ; ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪತ್ತೆ

ಹೈದರಾಬಾದ್: ಐಐಟಿಯ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಒಂದು ವರ್ಷದಲ್ಲಿ ನಡೆದ ನಾಲ್ಕನೇ ಪ್ರಕರಣ ಇದಾಗಿದೆ.

ಮಮಿತಾ ನಾಯಕ್ (21) ಆತ್ಮಹತ್ಯೆಗೆ ಶರಣಾದವಳು. ಓಡಿಶಾ ಮೂಲದ ಮಮಿತಾ ಎಂ.ಟೆಕ್ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದು, ಕಳೆದ ತಿಂಗಳಷ್ಟೇ ಐಐಟಿಗೆ ಸೇರಿದ್ದಲು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸ್ಟೇಲ್ ರೂಮಿನಲ್ಲಿಯೇ ಮಮಿತಾ ಶವವಾಗಿ ಪತ್ತೆಯಾಗಿದ್ದು, ಆಕೆಯ ಸಹಪಾಠಿಗಳು ಈ ವಿಚಾರವನ್ನು ಹಾಸ್ಟೇಲ್ ನಿರ್ವಾಹಕರಿಗೆ ತಿಳಿಸಿದ್ದಾರೆ. ಮಮಿತಾ, ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ಮಾನಸಿಕ ಒತ್ತಡದಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿಟ್ಟಿದ್ದಾಳೆ. ನನ್ನ ಸಾವಿಗೆ ನಾನೇ ಕಾರಣ ಯಾರ ಒತ್ತಡವೂ ನನ್ನ ಮೇಲಿಲ್ಲ ಎಂದು ಉಲ್ಲೇಖಿಸಿದ್ದಾಳೆ.

ಸಂಗಾರೆಡ್ಡಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular