alex Certify ಆ. 14 ರ ನಂತರ ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧ: ಹೆಸರಿದ್ದವರಿಗೆ 50,000 ರೂ. ದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆ. 14 ರ ನಂತರ ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧ: ಹೆಸರಿದ್ದವರಿಗೆ 50,000 ರೂ. ದಂಡ

ಬೆಂಗಳೂರು: ಬೆಂಗಳೂರಿನಲ್ಲಿ ಆಗಸ್ಟ್ 15ರ ಬಳಿಕ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧಿಸಲಾಗಿದ್ದು, ಯಾರಾದರೂ ಫ್ಲೆಕ್ಸ್, ಬ್ಯಾನರ್ ಹಾಕಿದಲ್ಲಿ 50,000 ರೂ. ದಂಡ ವಿಧಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾನರ್, ಫ್ಲೆಕ್ಸ್ ಯಾರದೇ ಆಗಿರಲಿ ಸಂಪೂರ್ಣ ನಿಷೇಧಿಸಲಾಗಿದೆ. ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕಬಾರದು. ಯಾರದಾದರೂ ಹೆಸರಿನಲ್ಲಿ ಫ್ಲೆಕ್ಸ್ ಬ್ಯಾನರ್ ಹಾಕಿದರೆ ಅವರಿಗೂ 50,000 ರೂ. ದಂಡ ವಿಧಿಸಲಾಗುವುದು. ಇನ್ನು ಮುಂದೆ ಎಫ್ಐಆರ್ ಕೂಡ ದಾಖಲಿಸಲಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸರ್ಕಾರದ ಯಾವುದಾದರೂ ಫ್ಲೆಕ್ಸ್, ಬ್ಯಾನರ್ ಹಾಕುವಂತಹ ಪ್ರಸಂಗ ಬಂದರೆ ಸರ್ಕಾರದಿಂದ ನಿಯಮ ರೂಪಿಸಲಾಗುತ್ತದೆ. ಅಕ್ರಮವಾಗಿ ಯಾರೂ ಫ್ಲೆಕ್ಸ್ ಹಾಕುವಂತಿಲ್ಲ. ಪ್ರಸ್ತುತ ಇರುವ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಬೇಕು. ಈ ಬಗ್ಗೆ ಹೈಕೋರ್ಟ್ ಆದೇಶ ಕೂಡ ಇದ್ದು, ಬೆಂಗಳೂರಿನಲ್ಲಿರುವ ಪ್ಲೆಕ್ಸ್, ಬ್ಯಾನರ್ ಗಳನ್ನು ತೆರವು ಮಾಡಲಾಗುವುದು. ಶುಭ ಹಾರೈಕೆ, ಹುಟ್ಟು ಹಬ್ಬ, ಶ್ರದ್ಧಾಂಜಲಿ ಮೊದಲಾದ ಫ್ಲೆಕ್ಸ್ ಬ್ಯಾನರ್ ಗಳನ್ನು ಹಾಕಿದಲ್ಲಿ ಎಫ್ಐಆರ್ ದಾಖಲಿಸಲಾಗುವುದು. ಮಲ್ಟಿ ನ್ಯಾಷನಲ್ ಹೋಲ್ಡಿಂಗ್ಸ್ ತೆರವುಗೊಳಿಸಲು ಹೇಳಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...