HomeKarnatakaBIGG NEWS : ಆ.20 ರಂದು ಬೆಳಗಾವಿಯಲ್ಲಿ `ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ : ಸಿಎಂ ಸಿದ್ದರಾಮಯ್ಯ

BIGG NEWS : ಆ.20 ರಂದು ಬೆಳಗಾವಿಯಲ್ಲಿ `ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ.ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 20 ರಂದು ಬೆಳಗಾವಿಯಲ್ಲಿ ಅಧಿಕೃತ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶಾಸಕರೊಂದಿಗೆ ವಿಡಿಯೋ ಸಂವಾದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮೀ ಉದ್ಘಾಟನೆಗೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಬರಲಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ 1.03 ಕೋಟಿ ಫಲಾನುಭವಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮೀ ಕಾರ್ಯಕ್ರಮ ಯಶಸ್ವಿಗಾಗಿ ಸಿಎಂ ಸಿದ್ದರಾಮಯ್ಯ ಕೂಡ ಶಾಸಕರು, ಸಚಿವರಿಗೆ ಸೂಚನೆ ನೀಡಿದ್ದಾರೆ. ದೇಶದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಜನೋಪಯೋಗಿ ಯೋಜನೆಯಾಗುತ್ತಿರುವ ಗೃಹಲಕ್ಷ್ಮೀ ಯೋಜನೆಯನ್ನು ಶಾಸಕರು ಸಚಿವರು ಒಟ್ಟಿಗೆ ಸೇರಿ ಯಶಸ್ವಿಗೊಳಿಸಬೇಕು. ಯೋಜನೆ ಕುರಿತು ನಿಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಚಾರ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular