ಬೆಂಗಳೂರು: ಕಸ್ತೂರಿರಂಗನ್ ವರದಿ ಪರಿಶೀಲನೆಗೆ ಕೇಂದ್ರ ಸರ್ಕಾರ ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ ಸಮಿತಿ ನೇಮಿಸಿದ್ದು, ಈ ಸಮಿತಿ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಘಟ್ಟ ಪರಿಸರ ಕುರಿತಾಗಿ ಕಸ್ತೂರಿರಂಗನ್ ವರದಿ ಜಾರಿ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ನಿವೃತ್ತ ಅಧಿಕಾರಿ ಸಂಜಯ್ ಕುಮಾರ್ ಸಮಿತಿ ನೇಮಿಸಿದೆ, ಈ ಸಮಿತಿ ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಸಂಜಯ್ ಕುಮಾರ್ ಸಮಿತಿ ಸರ್ಕಾರದ ಅಭಿಪ್ರಾಯ ಪಡೆಯಲಿದೆ. ಸಂಬಂಧ ಪಟ್ಟವರನ್ನು ಭೇಟಿಯಾಗಿ ಸಮಾಲೋಚನೆ ನಡೆಸುತ್ತಿದ್ದು, ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.
ಕಸ್ತೂರಿರಂಗನ್ ವರದಿ ಅವೈಜ್ಞಾನಿಕ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿ ಅದನ್ನು ಜಾರಿಗೊಳಿಸಬಾರದು ಎಂದು ಒತ್ತಾಯಿಸಿದ್ದಾರೆ. ಹೀಗಾಗಿ ಸಂಜಯ್ ಕುಮಾರ್ ಸಮಿತಿ ವರದಿ ನಂತರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.