ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರು ಹಾಗೂ ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದ್ದು, ಈ ನಡುವೆ ಕೆಲ ಗುತ್ತಿಗೆದಾರರು ವಿಪಕ್ಷ ನಾಯಕರನ್ನು ಭೇಟಿಯಾಗಿ ಚರ್ಚಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಬಿಬಿಎಂಪಿ ಗುತ್ತಿಗೆದಾರರ ಸಂಘದ ನಿಯೋಗ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದೆ. ಗುತ್ತಿಗೆದಾರ ಮಂಜುನಾಥ್ ನೇತೃತ್ವದ ನಿಯೋಗ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದೆ.
ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾದ ಗುತ್ತಿಗೆದಾರರು, ಹಣ ಬಿಡುಗಡೆ ವಿಳಂಬ ವಿಚಾರವಾಗಿ ಮಾತುಕತೆ ನಡೆಸಿದರು.