ನವದೆಹಲಿ :ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.3ರಷ್ಟಿತ್ತು. ಆದರೆ, ಈವರೆಗೂ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.3ರಷ್ಟಿತ್ತು .ಎನ್ಸಿಎಸ್ ಪ್ರಕಾರ, ಭೂಕಂಪದ ಆಳವು 10 ಕಿಲೋಮೀಟರ್ ಎಂದು ದಾಖಲಾಗಿದೆ.
ಇದಕ್ಕೂ ಮುನ್ನ ಆಗಸ್ಟ್ 7 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ದಿಗ್ಲಿಪುರದ ಉತ್ತರಕ್ಕೆ 150 ಕಿ.ಮೀ ದೂರದಲ್ಲಿ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದಕ್ಕೂ ಮುನ್ನ ಆಗಸ್ಟ್ 3 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು.