alex Certify ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಕುಟುಂಬ ಸದಸ್ಯರ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ; ಹೈಕೋರ್ಟ್ ಮಹತ್ವದ ಅಭಿಮತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಕುಟುಂಬ ಸದಸ್ಯರ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ; ಹೈಕೋರ್ಟ್ ಮಹತ್ವದ ಅಭಿಮತ

ಪ್ರಥಮ, ದ್ವಿತೀಯ ಭಾಷೆಯಾಗಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್- Kannada Prabha

ಪ್ರಕರಣವೊಂದರ ವಿಚಾರಣೆ ವೇಳೆ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಅಭ್ಯರ್ಥಿಗಳು ತಮ್ಮ ಮತ್ತು ಕುಟುಂಬ ಸದಸ್ಯರು ಹಾಗೂ ಅವಲಂಬಿತರ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯವಾಗಿದೆ. ಇದನ್ನು ಮರೆಮಾಚಿದರೆ ಅದು ಕೂಡಾ ಭ್ರಷ್ಟಾಚಾರವಾಗುತ್ತದೆ ಎಂದು ಹೇಳಿರುವುದಲ್ಲದೆ ಇದು ಅನರ್ಹತೆಗೂ ಕಾರಣವಾಗಬಹುದು ಎಂದು ತಿಳಿಸಿದೆ.

ಪ್ರಕರಣದ ವಿವರ: ಯಾದಗಿರಿ ಜಿಲ್ಲೆ ವಡಗೇರಾ ಗ್ರಾಮ ಪಂಚಾಯಿತಿ ಸದಸ್ಯೆ ಅಬೀದಾ ಬೇಗಂ ಎಂಬವರು ಚುನಾವಣೆಯ ನಂತರ ತಮ್ಮ ಹಾಗೂ ಪತಿಯ ಆಸ್ತಿ ವಿವರ ಸಲ್ಲಿಸಿಲ್ಲ, ಹಾಗಾಗಿ ಅವರನ್ನು ಅನರ್ಹಗೊಳಿಸಬೇಕೆಂದು ಪರಾಜಿತ ಅಭ್ಯರ್ಥಿ ಮಹಮ್ಮದ್ ಇಸ್ಮಾಯಿಲ್ ಎಂಬವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಮಾನ್ಯ ಮಾಡಿದ್ದ ಶಹಾಪುರ ಜೆ ಎಂ ಎಫ್ ಸಿ ನ್ಯಾಯಾಲಯ ಅಬೀದಾ ಬೇಗಂ ಅವರ ಆಯ್ಕೆಯನ್ನು ರದ್ದುಗೊಳಿಸಿತ್ತು.

ಇದನ್ನು ಪ್ರಶ್ನಿಸಿ ಅಬೀದಾ ಬೇಗಂ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕ ಸದಸ್ಯ ಪೀಠ ಕಲಬುರಗಿ ಪೀಠ, ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಮತ್ತು ಕುಟುಂಬ ಸದಸ್ಯರು ಹಾಗೂ ಅವಲಂಬಿತರ ಆಸ್ತಿ ವಿವರ ಘೋಷಿಸದಿದ್ದರೆ ಅಥವಾ ಮರೆ ಮಾಚಿದರೆ ಅದು ಕೂಡ ಭ್ರಷ್ಟಾಚಾರವಾಗುತ್ತದೆ ಜೊತೆಗೆ ಇದು ಅನರ್ಹತೆಗೂ ಕಾರಣವಾಗಬಹುದು ಎಂದು ಅಭಿಪ್ರಾಯ ಪಟ್ಟಿದೆ.

ಆದರೆ, ಈ ಪ್ರಕರಣದಲ್ಲಿ ಅರ್ಜಿ ಸಲ್ಲಿಕೆದಾರ ಇಸ್ಮಾಯಿಲ್ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಎಲ್ಲ ಸ್ಪರ್ಧಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಿಲ್ಲದಿರುವುದರಿಂದ ಹಾಗೂ ಗೆದ್ದ ಅಭ್ಯರ್ಥಿಯ ಆಯ್ಕೆಯನ್ನು ರದ್ದುಗೊಳಿಸಿ ತಮ್ಮನ್ನು ವಿಜಯಿ ಎಂದು ಘೋಷಿಸುವಂತೆ ಕೋರಿದ್ದು, ಆದರೆ ಇತರೆ ಸ್ಪರ್ಧಿಗಳು ಪ್ರತಿವಾದಿಗಳಾಗಿಲ್ಲದ ಕಾರಣ ಯಾರು ವಿಜಯಿ ಅಭ್ಯರ್ಥಿಯೆಂಬುದು ನಿರ್ಣಯಿಸುವುದು ಕಷ್ಟಕರವಾಗುತ್ತದೆ ಎಂದು ಅಭಿಪ್ರಾಯಪಟ್ಟು ಅಬೀದಾ ಬೇಗಂ ಅವರ ಸದಸ್ಯತ್ವ ರದ್ದುಗೊಳಿಸಿ JMFC ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದುಗೊಳಿಸಿ ನ್ಯಾಯಪೀಠ ತೀರ್ಪು ಪ್ರಕಟಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...