HomeIndiaBIG NEWS: ಬಿಜೆಪಿ ಮುಖಂಡನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

BIG NEWS: ಬಿಜೆಪಿ ಮುಖಂಡನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಲಖನೌ: ಬಿಜೆಪಿ ಯುವ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ.

ಅನುಜ್ ಚೌಧರಿ (34) ಹತ್ಯೆಯಾದ ಸಂಭಾಲ್ ಬಿಜೆಪಿ ನಾಯಕ. ಅನುಜ್ ಚೌಧರಿ ಮೊರಾದಾಬಾದ್ ನ ಅಪಾರ್ಟ್ ಮೆಂಟ್ ನ ಹೊರಗಡೆ ಸ್ನೇಹಿತರೊಂದಿಗೆ ನಡೆದು ಹೋಗುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಮೂವರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಚೌಧರಿ ಅವರನ್ನು ಮೊರಾದಾಬಾದ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಬಿಜೆಪಿ ಮುಖಂಡನ ಹತ್ಯೆ ಸಂಬಂಧ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular