HomeKarnatakaರಾಜ್ಯದಲ್ಲಿ ಹೆಚ್ಚುತ್ತಲೇ ಇದೆ 'ಹೃದಯಾಘಾತ' : ಟಿವಿ ನೋಡ್ತಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು

ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ‘ಹೃದಯಾಘಾತ’ : ಟಿವಿ ನೋಡ್ತಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು

ಹಾಸನ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಟಿವಿ ನೋಡ್ತಿದ್ದ ಉಪನ್ಯಾಸಕ ಕುಸಿದು ಬಿದ್ದು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ಮೃತನನ್ನು ತ್ಯಾಗರಾಜ್ ಎಂಟಿ (56) ಎಂದು ಗುರುತಿಸಲಾಗಿದೆ. ಇವರು ಹರದನಹಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು, ರಾತ್ರಿ ಮನೆಯಲ್ಲಿ ಟಿವಿ ನೋಡುತ್ತಾ ಕುಳಿತಿದ್ದ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಯುವಕರು, ಯುವತಿಯರು, ಮಕ್ಕಳು, ವೃದ್ದರೆನ್ನದೇ ಎಲ್ಲಾ ವಯೋಮಾನದವರೂ ಹೃದಯಾಘಾತಕ್ಕೆ ತುತ್ತಾಗುತ್ತಿದ್ದು, ಆತಂಕ ಮೂಡಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular