ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟುನಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಲಾರಿ ಅತಿ ವೇಗದಲ್ಲಿದ್ದು ಮತ್ತು ಮೂರು ಜನ ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದರು. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಟಿಪ್ಪರ್ ಲಾರಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದು, ಮತ್ತು ಒಂಬತ್ತು ಜನರು ಗಾಯಗೊಂಡಿದ್ದಾರೆ ಮತ್ತು ಜಿಲ್ಲಾ ಆಸ್ಪತ್ರೆ ಸೇರಿದಂತೆ ಚೆಂಗಲ್ಪಟ್ಟುವಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.ಅಪಘಾತಕ್ಕೆ ಕಾರಣವಾದ ಲಾರಿಯ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಶೋಧ ನಡೆಯುತ್ತಿದೆ ಎಂದು ಚೆಂಗಲ್ಪಟ್ಟು ಪೊಲೀಸ್ ಮೂಲಗಳು ತಿಳಿಸಿವೆ.