HomeIndiaಕೇಂದ್ರದಿಂದ ಗುಡ್ ನ್ಯೂಸ್: 2 ಲಕ್ಷ ಅಂಗನವಾಡಿ ಮೇಲ್ದರ್ಜೆಗೆ: ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ

ಕೇಂದ್ರದಿಂದ ಗುಡ್ ನ್ಯೂಸ್: 2 ಲಕ್ಷ ಅಂಗನವಾಡಿ ಮೇಲ್ದರ್ಜೆಗೆ: ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ

ನವದೆಹಲಿ: ಮಿಷನ್ ಪೋಷಣ್ 2.0 ಅಡಿಯಲ್ಲಿ 2 ಲಕ್ಷ ಅಂಗನವಾಡಿ ಕೇಂದ್ರಗಳನ್ನು ಸಕ್ಷಮ್ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಪೌಷ್ಠಿಕಾಂಶ ಮತ್ತು ಆರಂಭಿಕ ಮಕ್ಕಳ ಆರೈಕೆ ಮತ್ತು ಶಿಕ್ಷಣ ಸೇವೆಗಳ ಸುಧಾರಿತ ವಿತರಣೆಗಾಗಿ ಮಿಷನ್ ಪೋಷಣ್ 2.0 ಅಡಿಯಲ್ಲಿ 2 ಲಕ್ಷ ಅಂಗನವಾಡಿ ಕೇಂದ್ರಗಳನ್ನು ಸಕ್ಷಮ್ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮಾಹಿತಿ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಸಚಿವರು, ಇದಕ್ಕಾಗಿ 2025-26 ರವರೆಗೆ ವರ್ಷಕ್ಕೆ 40 ಸಾವಿರ ರೂ. ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸುಮಾರು 11 ಲಕ್ಷ ಸ್ಮಾರ್ಟ್‌ಫೋನ್‌ಗಳನ್ನು ನೀಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಕ್ಕಳ ಮಾಸಿಕ ಬೆಳವಣಿಗೆಯ ಮಾಪನ ಮತ್ತು ಉದ್ದೇಶಿತ ಮನೆ ಭೇಟಿಗಾಗಿ 500 ರೂಪಾಯಿಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಎಂದು ಅವರು ಹೇಳಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular