HomeIndiaBIG NEWS: ಐಪಿಸಿ ಸೇರಿ ಬ್ರಿಟೀಷರ ಕಾಲದ ಮೂರು ಕಾನೂನು ಬದಲಾವಣೆ: ನ್ಯಾಯ ಸಂಹಿತಾ, ಸುರಕ್ಷಾ...

BIG NEWS: ಐಪಿಸಿ ಸೇರಿ ಬ್ರಿಟೀಷರ ಕಾಲದ ಮೂರು ಕಾನೂನು ಬದಲಾವಣೆ: ನ್ಯಾಯ ಸಂಹಿತಾ, ಸುರಕ್ಷಾ ಸಂಹಿತಾ, ಸಾಕ್ಷಿ ಮಸೂದೆ ಮಂಡನೆ

ನವದೆಹಲಿ: ಬ್ರಿಟಿಷರ ಕಾಲದ 3 ಕಾನೂನುಗಳನ್ನು ಬದಲಿಸಲು ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಮಸೂದೆಗಳನ್ನು ಸರ್ಕಾರ ಪರಿಚಯಿಸಿದೆ.

ಭಾರತೀಯ ನ್ಯಾಯ ಸಂಹಿತಾ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ಮತ್ತು ಭಾರತೀಯ ಸಾಕ್ಷಿ ಮಸೂದೆ 2023 ಅನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಸೂದೆಗಳನ್ನು ಮಂಡಿಸುವಾಗ ಗೃಹ ಸಚಿವ ಅಮಿತ್ ಶಾ ಅವರು, ಭಾರತೀಯ ದಂಡ ಸಂಹಿತೆ(ಐಪಿಸಿ- Indian Penal Code) 1860 ಬದಲಿಗೆ ಭಾರತೀಯ ನ್ಯಾಯ ಸಂಹಿತಾ 2023 ಮತ್ತು ಕ್ರಿಮಿನಲ್ ಪ್ರೊಸೀಜರ್ ಆಕ್ಟ್ 1898 ರ ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ 2023 ಬರಲಿದೆ ಎಂದು ಹೇಳಿದರು.

ಈ ಮಸೂದೆಗಳು ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಪರಿವರ್ತಿಸುತ್ತವೆ. ಶಾಸನಗಳು ಜನರಿಗೆ ದಂಡ ವಿಧಿಸುವ ಬದಲು ನ್ಯಾಯ ಒದಗಿಸುವ ಗುರಿಯನ್ನು ಹೊಂದಿವೆ. ಕೂಲಂಕಷವಾಗಿ ಚರ್ಚಿಸಿ ಈ ಮಸೂದೆಗಳನ್ನು ತರಲಾಗಿದೆ ಎಂದರು.

ಮಸೂದೆಗಳ ನಿಬಂಧನೆಗಳ ಕುರಿತು ಮಾತನಾಡಿದ ಅವರು, ದೇಶದ್ರೋಹಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು. ಅಪರಾಧ ನ್ಯಾಯ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಕಾನೂನುಗಳಲ್ಲಿ 313 ಬದಲಾವಣೆಗಳನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಹಿಳೆಯರು ಮತ್ತು ಮಕ್ಕಳಿಗೆ ತ್ವರಿತ ನ್ಯಾಯ ಒದಗಿಸಲು ವಿಶೇಷ ನಿಬಂಧನೆಗಳನ್ನು ಮಾಡಲಾಗಿದೆ. ಇಡೀ ಅಪರಾಧ ನ್ಯಾಯ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸಲು ವಿಶೇಷ ಗಮನಹರಿಸಲಾಗಿದೆ. ಮಸೂದೆಯನ್ನು ಹೆಚ್ಚಿನ ಚರ್ಚೆಗಾಗಿ ಸಂಸದೀಯ ಸ್ಥಾಯಿ ಸಮಿತಿಗೆ ಕಳುಹಿಸಲಾಯಿತು. ವಿಧೇಯಕಗಳನ್ನು ಮಂಡಿಸಿದಾಗ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರ ಅಮಾನತು ವಿಷಯವನ್ನು ಪ್ರಸ್ತಾಪಿಸಿದ ಪ್ರತಿಪಕ್ಷ ಸದಸ್ಯರು ಸದನದಿಂದ ಹೊರನಡೆದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular