HomeKarnatakaBIGG NEWS : `ಗ್ಯಾರಂಟಿ’ ಜಾರಿಯಿಂದ ರಾಜ್ಯದ `ಜಿಡಿಪಿ’ ಹೆಚ್ಚಳ : ಸಿಎಂ ಸಿದ್ದರಾಮಯ್ಯ ವಿಶ್ವಾಸ

BIGG NEWS : `ಗ್ಯಾರಂಟಿ’ ಜಾರಿಯಿಂದ ರಾಜ್ಯದ `ಜಿಡಿಪಿ’ ಹೆಚ್ಚಳ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಳಗಾವಿ : ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ನಡೆದ ಸಮಾರಂಭದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆಗೊಳಿಸಿ ವಿವಿಧ ಅಭಿವೃದ್ಧಿ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರಕಾರದ‌ ಆದಾಯ ಕೂಡ ಹೆಚ್ಚಾಗಲಿದೆ. ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ದೇಶದಲ್ಲೇ ಅಪರೂಪದ ಯೋಜನೆಯಾಗಿದೆ.‌ ವರ್ಷಕ್ಕೆ 35 ಸಾವಿರ ಕೋಟಿ ರೂಪಾಯಿ ಇದಕ್ಕೆ ವಿನಿಯೋಗಿಸಲಾಗುವುದು ಎಂದರು.

ಗ್ಯಾರಂಟಿ ಅನುಷ್ಠಾನ ಸೇರಿದಂತೆ ಸರಕಾರದ‌ ಸಾಧನೆಯು ವಿರೋಧ ಪಕ್ಷವನ್ನು ಕಂಗೆಡಿಸಿದೆ.‌ ಏನೇ ಆದರೂ ಸರಕಾರ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚುನಾವಣಾ ಸಂದರ್ಭದಲ್ಲಿ ನೀಡಲಾದ ಪ್ರತಿಯೊಂದು ಭರವಸೆಗಳನ್ನು ಸರಕಾರ ಈಡೇರಿಸಲಿದೆ. ನುಡಿದಂತೆ ನಡೆಯುವ ಸರಕಾರ ನಮ್ಮದು ಎಂದರು.

ಕಳೆದ ಬಾರಿ 165 ಭರವಸೆಗಳ ಪೈಕಿ 158 ಈಡೇರಿಸಲಾಗಿದೆ. ಅದೇ ರೀತಿ ಈ ಸಲ ನೀಡಲಾಗಿರುವ ಐದು ಗ್ಯಾರಂಟಿ ಇತ್ತೀಚಿನ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಲಾದ 76 ಭರವಸೆಗಳನ್ನು ಈಡೇರಿಸಲು ಪ್ರಸಕ್ತ ಸಾಲಿನ ಬಜೆಟ್ ನಲ್ಲಿಯೇ ಕ್ರಮ ಕೈಗೊಳ್ಳಲಾಗಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ. ಗೃಹಲಕ್ಷ್ಮೀ ಈ ಮಾಹೆಯಲ್ಲಿ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೊಳಿಸಲಾಗುವುದು. ಪ್ರಮುಖ ಸಮಾಜ ಸುಧಾರಕರ ಪೈಕಿ ಬಸವಣ್ಣ ನನಗೆ ಅತ್ಯಂತ ಇಷ್ಟವಾದ ವ್ಯಕ್ತಿ. ಆದ್ದರಿಂದ ಬಸವ ಜಯಂತಿಯ ದಿನ ಪ್ರಮಾಣವಚನ ಸ್ವೀಕರಿಸಿ ನುಡಿದಂತೆ ನಡೆದಿರುತ್ತೇವೆ. ಆದ್ದರಿಂದ ಜನರು ಮತ್ತೇ ಆಶೀರ್ವಾದ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular