alex Certify ‘ಕಾವೇರಿ’ ನೀರಿನ ಬಗ್ಗೆ ಮತ್ತೆ ತಮಿಳುನಾಡು ಕ್ಯಾತೆ: ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಾವೇರಿ’ ನೀರಿನ ಬಗ್ಗೆ ಮತ್ತೆ ತಮಿಳುನಾಡು ಕ್ಯಾತೆ: ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ

ನವದೆಹಲಿ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ.

ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ಕರ್ನಾಟಕದ ವಿರುದ್ಧ ಆರೋಪ ಮಾಡಲಾಗಿದೆ. ಕರ್ನಾಟಕ ಸರ್ಕಾರ ನೀರು ಬಿಡದ ಹಿನ್ನೆಲೆಯಲ್ಲಿ ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ ಬೆಳೆಗಳು ಒಣಗುತ್ತಿವೆ. ತಮ್ಮ ಪಾಲಿನ ನೀರು ಬಿಡುಗಡೆಗೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಕೋರಲಾಗಿದೆ.

ಈ ಬಾರಿ ಮಳೆ ಕಡಿಮೆಯಾಗಿರುವುದರಿಂದ ಸಮಸ್ಯೆ ಎದುರಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರು ಇಲ್ಲದೇ ಬೆಳೆಗಳು ಒಣಗುತ್ತಿದ್ದು, ನೀರು ಹರಿಸಲು ಸೂಚಿಸಬೇಕೆಂದು ಕೋರಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...