ಬೆಂಗಳೂರು : ಜವಾಹರ ನವೋದಯ ವಿದ್ಯಾಲಯದ 2024-25 ಸಾಲಿನಲ್ಲಿ 6ನೇ ತರಗತಿಯ ಆಯ್ಕೆಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ www.navodaya.gov.in ಮುಖಾಂತರ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಆಗಸ್ಟ್ 17 ರಂದು ಕೊನೆಯ ದಿನವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜವಾಹರ್ ನವೋದಯ ವಿದ್ಯಾಲಯದ ಅಧಿಕೃತ ವೆಬ್ಸೈಟ್ www.navodaya.gov.in ಗೆ ಭೇಟಿ ನೀಡಬೇಕು.
5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 2024 ರ ಜನವರಿ 20 ರಂದು ಆಯ್ಕೆ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ನವೋದಯ ವಿದ್ಯಾಲಯ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.