HomeIndiaಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಸುಧಾ ಮೂರ್ತಿ, ಶಂಕರ್ ಮಹಾದೇವನ್ ಸೇರಿ 19 ಜನರ ಸಮಿತಿ ರಚನೆ

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಸುಧಾ ಮೂರ್ತಿ, ಶಂಕರ್ ಮಹಾದೇವನ್ ಸೇರಿ 19 ಜನರ ಸಮಿತಿ ರಚನೆ

ನವದೆಹಲಿ: ಹೊಸ ಪಠ್ಯಪುಸ್ತಕಗಳ ಪರಿಷ್ಕರಣೆ, ರಚನೆಗೆ ಎನ್‌ಸಿಇಆರ್‌ಟಿಯ 19 ಸದಸ್ಯರ ಸಮಿತಿಗೆ ಸುಧಾ ಮೂರ್ತಿ, ಶಂಕರ್ ಮಹಾದೇವನ್ ಅವರನ್ನು ಆಯ್ಕೆ ಮಾಡಲಾಗಿದೆ.

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, ಸಂಗೀತ ಮಾಂತ್ರಿಕ ಶಂಕರ್ ಮಹಾದೇವನ್, ಅರ್ಥಶಾಸ್ತ್ರಜ್ಞ ಸಂಜೀವ್ ಸನ್ಯಾಲ್ ಮತ್ತು ಇತರ 16 ಮಂದಿ ಎನ್‌ಸಿಇಆರ್‌ಟಿ ಹೊಸ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ರಚಿಸಿರುವ ಹೊಸ ಸಮಿತಿಯ ಭಾಗವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

19 ಸದಸ್ಯರ ರಾಷ್ಟ್ರೀಯ ಪಠ್ಯಕ್ರಮ ಮತ್ತು ಬೋಧನಾ ಕಲಿಕಾ ಸಾಮಗ್ರಿ ಸಮಿತಿ(NSTC) ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆ(NIEPA) ಕುಲಪತಿ MC ಪಂತ್ ನೇತೃತ್ವ ವಹಿಸುತ್ತದೆ ಮತ್ತು 3 ರಿಂದ 12 ನೇ ತರಗತಿಗಳಿಗೆ ಪಠ್ಯಪುಸ್ತಕಗಳನ್ನು ರಚಿಸಲಿದೆ.

ಪಠ್ಯಪುಸ್ತಕಗಳು ಮತ್ತು ಇತರ ಬೋಧನಾ ಕಲಿಕಾ ಸಾಮಗ್ರಿಗಳನ್ನು ಸಮಿತಿ ಸಿದ್ಧಪಡಿಸಲಿದೆ. ಇವುಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ) ಉಲ್ಲೇಖಿಸಿ ನಿಯಮಗಳ ಪ್ರಕಾರ ಪ್ರಕಟಿಸಿ ಬಳಸುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) 2020 ರ ಅನುಷ್ಠಾನದ ಭಾಗವಾಗಿ ಕೆ. ಕಸ್ತೂರಿರಂಗನ್ ನೇತೃತ್ವದ ಸ್ಟೀರಿಂಗ್ ಸಮಿತಿಯು ಅಭಿವೃದ್ಧಿಪಡಿಸಿದ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನೊಂದಿಗೆ(ಎನ್‌ಸಿಎಫ್-ಎಸ್‌ಇ) ಪಠ್ಯಕ್ರಮವನ್ನು ಜೋಡಿಸಲು ಸಮಿತಿಯು ಕೆಲಸ ಮಾಡುತ್ತದೆ.

ಅಂತಿಮ NCF-SE ಅನ್ನು ಈಗಾಗಲೇ ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಸಲ್ಲಿಸಲಾಗಿದ್ದು, ಸಾರ್ವಜನಿಕ ಡೊಮೇನ್‌ನಲ್ಲಿ ಇನ್ನೂ ಬಿಡುಗಡೆಯಾಗಬೇಕಿದೆ. ಚೌಕಟ್ಟಿನ ಕರಡು ಏಪ್ರಿಲ್‌ನಲ್ಲಿ ಬಿಡುಗಡೆಯಾಯಿತು.

ಪ್ರಿನ್ಸ್‌ ಟನ್ ವಿಶ್ವವಿದ್ಯಾನಿಲಯದ ಗಣಿತಶಾಸ್ತ್ರದ ಪ್ರಾಧ್ಯಾಪಕ ಮಂಜುಲ್ ಭಾರ್ಗವ್ ಅವರು ಸಮಿತಿಯ ಸಹ-ಅಧ್ಯಕ್ಷರಾಗಿದ್ದಾರೆ.

ಗಣಿತಶಾಸ್ತ್ರಜ್ಞೆ ಸುಜಾತಾ ರಾಮದೊರೈ, ಬ್ಯಾಡ್ಮಿಂಟನ್ ಆಟಗಾರ್ತಿ ಯು. ವಿಮಲ್ ಕುಮಾರ್, ನೀತಿ ಅಧ್ಯಯನ ಕೇಂದ್ರದ ಅಧ್ಯಕ್ಷ ಎಂಡಿ ಶ್ರೀನಿವಾಸ್ ಮತ್ತು ಭಾರತೀಯ ಭಾಷಾ ಸಮಿತಿಯ ಅಧ್ಯಕ್ಷ ಚಾಮು ಕೃಷ್ಣ ಶಾಸ್ತ್ರಿ ಇದರ ಇತರ ಸದಸ್ಯರು.

ಮೇ ತಿಂಗಳಲ್ಲಿ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಿಂದ ಹಲವಾರು ವಿಷಯಗಳು ಮತ್ತು ಭಾಗಗಳನ್ನು ಕೈಬಿಡುವುದು ವಿವಾದವನ್ನು ಹುಟ್ಟುಹಾಕಿತು. ಪ್ರತಿಪಕ್ಷಗಳು ಬಿಜೆಪಿ ನೇತೃತ್ವದ ಕೇಂದ್ರವನ್ನು ದೂಷಿಸಿದವು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular