HomeKarnatakaBIG NEWS : ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ ‘SSLC’ ಪರೀಕ್ಷೆ ನಡೆಸದಂತೆ ‘ಶಿಕ್ಷಣ ಇಲಾಖೆ’ ಮಹತ್ವದ...

BIG NEWS : ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ ‘SSLC’ ಪರೀಕ್ಷೆ ನಡೆಸದಂತೆ ‘ಶಿಕ್ಷಣ ಇಲಾಖೆ’ ಮಹತ್ವದ ಸೂಚನೆ

ಬೆಂಗಳೂರು : ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ ಕೈಗೊಂಡಿದ್ದು, ಮುಂದಿನ ಬಾರಿ ನಡೆಯುವ ಎಸ್ಎಸ್ ಎಲ್ ಸಿ ಪರೀಕ್ಷೆಯನ್ನು ಗ್ರಾಮೀಣ ಪ್ರದೇಶದಲ್ಲಿ ನಡೆಸದಂತೆ ಸೂಚನೆ ನೀಡಿದೆ ಎನ್ನಲಾಗಿದೆ.

ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಪ್ರಕರಣಗಳಿಗೆ ಪೋಷಕರು ವ್ಯಾಪಾಕ ಟೀಕೆ ವ್ಯಕ್ತಪಡಿಸಿದ್ದು, ಹೀಗಾಗಿ ನಕಲು ತಡೆಗಟ್ಟಲು 2024 ರ ಮಾರ್ಚ್/ಏಪ್ರಿಲ್ ನಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸದಂತೆ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.

ಕಳೆದ ವರ್ಷ ರಾಜ್ಯದ 724 ಜಿಲ್ಲಾ, 755 ತಾಲೂಕು, 604 ಹೋಬಳಿ ಮತ್ತು 1,222 ಗ್ರಾಮೀಣ ಪ್ರದೇಶದ ಕೇಂದ್ರಗಳು ಸೇರಿ ರಾಜ್ಯಾದ್ಯಂತ ಒಟ್ಟಾರೆ 3,305 ಕೇಂದ್ರಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಗ್ರಾಮೀಣ ಪ್ರದೇಶಗಳಿಗೆ ಕೊಕ್ ನೀಡಿ, ಹೋಬಳಿ, ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಆದ್ಯತೆ ನೀಡುವಂತೆ ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular