ಬೆಂಗಳೂರು: ಬಿಸಿಯೂಟ ತಯಾರಕರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸಿ ಈಡೇರಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಎಐಟಿಯುಸಿ ಸಂಯೋಜಿತ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್ ರಾಜ್ಯ ಸಮಿತಿ ಪದಾಧಿಕಾರಿಗಳೊಂದಿಗೆ ಅವರು ಬಿಸಿಯೂಟ ನೌಕರರ ಬೇಡಿಕೆ ಮತ್ತು ಸಮಸ್ಯೆ ಈಡೇರಿಸುವ ಕುರಿತಾಗಿ ಚರ್ಚೆ ನಡೆಸಿದ್ದಾರೆ.
ಬಿಸಿಯೂಟಕ್ಕೆ ಸಂಬಂಧಿಸಿದಂತೆ ಬಿಡುಗಡೆಯಾಗುವ ಹಣವನ್ನು ಮುಖ್ಯ ಶಿಕ್ಷಕರು ಮತ್ತು ಅಡುಗೆಯವರ ಜಂಟಿ ಖಾತೆಯಲ್ಲಿ ಮುಂದುವರೆಸಬೇಕು. ನಿವೃತ್ತರಾದ ಬಿಸಿಯೂಟ ತಯಾರಕರಿಗೆ ಇಡುಗಂಟು ಕೊಡಬೇಕು. ಬಜೆಟ್ ನಲ್ಲಿ ಘೋಷಣೆ ಮಾಡಿದ ಒಂದು ಸಾವಿರಗಳನ್ನು ಜೂನ್ ನಿಂದಲೇ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಪದಾಧಿಕಾರಿಗಳು ಮನವಿ ಮಾಡಿದ್ದು, ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದ ಸಚಿವ ಮಧು ಬಂಗಾರಪ್ಪ ಈ ನಿಟ್ಟಿನಲ್ಲಿ ಅದ್ಭುತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.