BREAKING : ವಿಶ್ವವಿಖ್ಯಾತ ನೇತ್ರ ತಜ್ಞ ಡಾ.ಚಂದ್ರಪ್ಪ ರೇಷ್ಮಿ ಇನ್ನಿಲ್ಲ

ಕಲಬುರಗಿ : ವಿಶ್ವವಿಖ್ಯಾತ ನೇತ್ರ ತಜ್ಞ ಡಾ.ಚಂದ್ರಪ್ಪ ರೇಷ್ಮಿ (90) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಚಿತ್ತಾಪುರ ಪಟ್ಟಣದಲ್ಲಿ ಜನಿಸಿದ್ದ ಡಾ.ಚಂದ್ರಪ್ಪ ರೇಷ್ಮಿ ಅಮೆರಿಕದಲ್ಲಿ ಹಲವು ವರ್ಷಗಳ ಕಾಲ ನೆಲೆಸಿದ್ದರು. ಡಾ.ಚಂದ್ರಪ್ಪ ರೇಷ್ಮಿ ಅವರು ವಿಶ್ವ ಪ್ರಸಿದ್ಧ ನೇತ್ರತಜ್ಞರಾಗಿ ಹೆಸರು ಪಡೆದಿದ್ದರು. ಇಂದು ಚಿತ್ತಾಪುರದ ಪಟ್ಟಣದಲ್ಲಿ ಡಾ.ಚಂದ್ರಪ್ಪ ರೇಷ್ಮಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಮಾಜಿ ರಾಷ್ಟ್ರಪತಿ ಗ್ಯಾನಿ ಜೈಲ್ ಸಿಂಗ್, ಟಾಟಾ ಸಮೂಹ ಸಂಸ್ಥೆಯ ಸಂಸ್ಥಾಪಕ ಜೆಆರ್ಡಿ ಟಾಟಾ ಸೇರಿದಂತೆ ಅನೇಕ ಗಣ್ಯರಿಗೆ ಇವರು ನೇತ್ರ ಚಿಕಿತ್ಸೆ ಮಾಡಿದ್ದರು. ವಿಶ್ವದ ಮೂರನೇ ಬೆಸ್ಟ್ ಐ ಡಾಕ್ಟರ್ ಎಂದೇ ಪ್ರಖ್ಯಾತಿ ಪಡೆದಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read