HomeKarnatakaBIGG NEWS : ರಾಜ್ಯದಲ್ಲಿ ಅಸಮರ್ಪಕ ಮುಂಗಾರು ಮಳೆ : ಕೇಂದ್ರಕ್ಕೆ ಪತ್ರ ಬರೆದ ಸಿಎಂ!

BIGG NEWS : ರಾಜ್ಯದಲ್ಲಿ ಅಸಮರ್ಪಕ ಮುಂಗಾರು ಮಳೆ : ಕೇಂದ್ರಕ್ಕೆ ಪತ್ರ ಬರೆದ ಸಿಎಂ!

ಬೆಂಗಳೂರು : ರಾಜ್ಯದಲ್ಲಿ ಅಸಮರ್ಪಕ ಮುಂಗಾರು ಮಳೆ ಹಿನ್ನೆಲೆಯಲ್ಲಿ ಬರ ಘೋಷಣೆ ಸಂಬಂಧ ಇರುವ ನಿಯಮಾವಳಿಗಳನ್ನು ಸಡಿಲಿಕೆ ಮಾಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ತಡವಾಗಿ ಆಗಮಿಸಿದ್ದು, ಮುಂಗಾರು ಮಳೆಯ ಕೊರತೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಬರಗಾಲ ಘೋಷಣೆಗೆ ಕೇಂದ್ರ ಸರ್ಕಾರದ ಷರತ್ತುಗಳ ಅಡ್ಡಿಯಾಗಿದ್ದು, ಬರಗಾಲ ಘೋಷಣೆ ಸಂಬಂಧ ಇರುವ ನಿಯಮಾವಳಿಗಳನ್ನು ಸಡಿಲಿಕೆ ಮಾಡುವಂತೆ ಕೋರಿ ಸಿಎಂ ಕಚೇರಿಯಿಂದ ಕೇಂದ್ರದ ಕೃಷಿ ಸಚಿವಾಲಯಕ್ಕೆ ಪತ್ರ ರವಾನೆಯಾಗಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಈವರೆಗೆ ಶೇ. 12 ರಷ್ಟು ಮಳೆ ಕೊರತೆಯಾಗಿದೆ. ಕಳೆದ 10 ದಿನಗಳಲ್ಲಿ ಶೇ. 63 ರಷ್ಟು ಮಳೆ ಅಭಾವ ಸೃಷ್ಟಿಯಾಗಿದ್ದು, ತಡವಾಗಿ ಬಿತ್ತನೆ ಕಾರ್ಯ ನಡೆಸಿದ ರೈತರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬರಗಾಲ ಘೋಷಣೆ ಮಾಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular