ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಬ್ರಿಜೇಶ್ ರೆಡ್ಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪ ನಡೆದಿದೆ.
ಬನ್ನೇರುಘಟ್ಟ ಸಮೀಪದ ಹುಲ್ಲಹಳ್ಳಿಯ ಮ್ಯಾಂಗೋ ಎಕ್ರೆಸ್ ಲೇಔಟ್ ನ ಮನೆಯಲ್ಲಿ ಬ್ರಿಜೇಶ್ ರೆಡ್ಡಿ ನೇಣಿಗೆ ಕೊರಳೊಡ್ಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ನಷ್ಟಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಹೆಚ್.ಎಸ್.ಆರ್.ಲೇಔಟ್ ನಲ್ಲಿ ಮನೆ, ಆಫೀಸ್ ಹೊಂದಿದ್ದ ಬ್ರಿಜೇಶ್ ರೆಡ್ಡಿ, ಇತ್ತೀಚೆಗೆ ಹೆಚ್.ಎಸ್.ಆರ್.ಲೇಔಟ್ ಮನೆ ಮಾರಾಟ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.