HomeKarnatakaಬನ್ನೇರುಘಟ್ಟದ ನಿರ್ಜನ ಪ್ರದೇಶದಲ್ಲಿ ಮಹಿಳೆ ಶವವಾಗಿ ಪತ್ತೆ

ಬನ್ನೇರುಘಟ್ಟದ ನಿರ್ಜನ ಪ್ರದೇಶದಲ್ಲಿ ಮಹಿಳೆ ಶವವಾಗಿ ಪತ್ತೆ

ಬೆಂಗಳೂರು: ಬನ್ನೇರುಘಟ್ಟದ ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

ಬ್ಯಾಟರಾಯನದೊಡ್ಡಿ ನಿವಾಸಿ 38 ವರ್ಷದ ಮಹಿಳೆ ಮುನಿರತ್ನಮ್ಮ ಮೃತ ಮಹಿಳೆ. ತಂಗಿಯ ಮಗನನ್ನು ನಿನ್ನೆ ಸಂಜೆ ವಾಕಿಂಗ್ ಗೆ ಕರೆದೊಯ್ದಿದ್ದ ಮಹಿಳೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಎಷ್ಟು ಹೊತ್ತಾದರೂ ಇಬ್ಬರೂ ಮನೆಗೆ ಬಾರದಿದ್ದಾಗ ಕುಟುಂಬದವರು ಹುಡುಕಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಭೂತಾನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಬಾಲಕ ತಲೆ, ಕೈ-ಕಾಲಿಗೆ ಗಂಭೀರವಾದ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಾಲಕ ಸಿಕ್ಕ ಜಾಗದಿಂದ ಸ್ವಲ್ಪ ದೂರದಲ್ಲೇ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಸ್ಥಳಕ್ಕೆ ಎಫ್ ಎಸ್ ಎಲ್ ತಂಡ, ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular