ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಿನ್ನೆ ರಾತ್ರಿ ವಿದೇಶದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು, ಬೆಂಗಳೂರಿಗೆ ಬರುತ್ತಿದ್ದಂತೆ ರಾಜ್ಯ ಸರ್ಕಾರದ ವಿರುದ್ಧ ಗರಂ ಆದರು.
ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿವಿದೇಶಕ್ಕೆ ಹೋಗಲು ನಮಗೇನು ಯೋಗ್ಯತೆ ಇಲ್ವಾ? ಎಂದು ವಿದೇಶದಿಂದ ಬರುತ್ತಿದ್ದಂತೆ ಮಾಜಿ ಸಿಎಂ ಹೆಚ್ಡಿಕೆ ಗರಂ ಆಗಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಕೆಲ ಸಚಿವರು ಕುಮಾರಸ್ವಾಮಿ ವಿದೇಶದಲ್ಲೇ ಇದ್ದು ಬಿಡಲಿ ಎಲ್ಲಾ ವ್ಯವಸ್ಥೆ ಮಾಡಿಕೊಡುತ್ತೇನೆ ಎಂದು ಹೇಳಿದ್ದಾರೆ. ಅವರಿಗೆ ಮಾನ ಮರ್ಯಾದೆ ಇಲ್ಲದೆ ಇಲ್ಲಿ ದರೋಡೆ ಮಾಡಿಕೊಂಡು ಕೂತಿದ್ದಾರೆ. ಅದಕ್ಕೆ ನಮ್ಮನ್ನ ಸಚಿವರು ವಿದೇಶಕ್ಕೆ ಕಳಿಸುತ್ತಾರೆ ಎಂದು ಟಾಂಗ್ ನೀಡಿದರು.
ಕಳೆದ 12 ವರ್ಷದಿಂದ ಪಕ್ಷದ ಸಂಘಟನೆಗೆ ಸಮಯ ಇಟ್ಟಿದ್ದೆ.ಈಗ ಸಮಯ ಬಂದಿದೆ. ದೇಶ ಸುತ್ತು, ಕೋಶ ಓದು ಅಂತಾ ಹಿರಿಯರ ಗಾದೆ ಮಾತಿದೆ. ಯಾವ ದೇಶದಲ್ಲಿ ಏನೇನಿದೆ ಅಂತಾ ತಿಳಿದುಕೊಳ್ಳಬೇಕಲ್ಲ..ಹಾಗಾಗಿ ವಿದೇಶ ಪ್ರವಾಸಕ್ಕೆ ಹೋಗಿದ್ದೆ ಎಂದು ಹೆಚ್ಡಿಕೆ ಹೇಳಿದರು.