ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ ಶನಿವಾರ ವಿವಿಧ ಅಪಘಾತದಲ್ಲಿ ಒಂದೇ ದಿನ 37 ಮಂದಿ ಸಾವನ್ನಪ್ಪಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ 5 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ರಾತ್ರಿ ಹೊತ್ತು ಸಂಚರಿಸುವುದು ಆದಷ್ಟು ಕಡಿಮೆ ಮಾಡಿ, ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರಿ ಎಂದು ಸೂಚನೆ ನೀಡಿದ್ದಾರೆ. ರಸ್ತೆ ಅಪಘಾತದಲ್ಲಿ ಕಳೆದ ಶನಿವಾರ ಒಂದೇ ದಿನ 37 ಮಂದಿ ಸಾವು ‘ಕರಾಳ ಶನಿವಾರ’ ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. ರಸ್ತೆ ಅಪಘಾತದಲ್ಲಿ ಒಂದೇ ದಿನ 37 ಮಂದಿ ಸಾವು ‘ಕರಾಳ ಶನಿವಾರ’ ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.