HomeCrimeSHOCKING: ಶಾಲೆಗೆ ತೆರಳುತ್ತಿದ್ದ ಬಾಲಕಿ ಅಪಹರಿಸಿ ಅತ್ಯಾಚಾರ

SHOCKING: ಶಾಲೆಗೆ ತೆರಳುತ್ತಿದ್ದ ಬಾಲಕಿ ಅಪಹರಿಸಿ ಅತ್ಯಾಚಾರ

ರೋಹ್ಟಕ್‌ ನಲ್ಲಿ ಶಾಲೆಗೆ ಹೋಗುತ್ತಿದ್ದ 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಹರಿಯಾಣ ಪೊಲೀಸರು ಭಾನುವಾರ ಹೇಳಿದ್ದಾರೆ.

ಆರೋಪಿಗಳು ಬಾಲಕಿಯನ್ನು ಹೋಟೆಲ್‌ಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದಾರೆ. ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ವ್ಯಕ್ತಿಗಾಗಿ ಶೋಧ ನಡೆಯುತ್ತಿದೆ. ಕಾರ್ ಚಾಲಕ ತಲೆಮರೆಸಿಕೊಂಡಿದ್ದು, ಆರೋಪಿಗಳು 21 ರಿಂದ 32 ವರ್ಷ ವಯಸ್ಸಿನವರು ಎಂದು ಸಂಪ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ) ರಾಕೇಶ್ ಕುಮಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಲ್ಲಿ ಒಬ್ಬ ಬಾಲಕಿಗೆ ಪರಿಚಿತನಾಗಿದ್ದು, ಆಕೆ ಶಾಲೆಗೆ ಹೋಗುತ್ತಿದ್ದಾಗ ತಡೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಾಲಕಿ ತನ್ನ ಕುಟುಂಬವನ್ನು ಹೋಟೆಲ್‌ನಿಂದ ಸಂಪರ್ಕಿಸಿದ ನಂತರ ಪೊಲೀಸರಿಗೆ ದೂರು ನೀಡಲಾಯಿತು. ಘಟನೆಯ ನಂತರ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪೊಲೀಸರು ಈ ವಿಚಾರದಲ್ಲಿ ಸೂಕ್ಷ್ಮತೆ ಮತ್ತು ಚುರುಕಿನಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular