ಚೆನ್ನೈ: ನೀಟ್ ಪರೀಕ್ಷೆಯಲ್ಲಿ ಎರಡು ಬಾರಿ ಪಾಸ್ ಆಗಲು ವಿಫಲವಾದ ಕಾರಣ 19 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ವಿದ್ಯಾರ್ಥಿ ತಮ್ಮ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಗರದ ಕ್ರೋಮ್ ಪೇಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿಯನ್ನು ಜಗದೀಶ್ವರನ್ ಎಂದು ಗುರುತಿಸಲಾಗಿದೆ.
ಸಂತ್ರಸ್ತ ಎರಡು ಪ್ರಯತ್ನಗಳಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಅಗತ್ಯ ಅಂಕಗಳನ್ನು ಪಡೆಯಲು ವಿಫಲರಾಗಿದ್ದರು. ಈ ಹಿನ್ನೆಲೆ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಇದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಮಾಡಿಕೊಂಡಿದ್ದಾನೆ.