HomeKarnatakaBIGG NEWS : ಇನ್ನು 6 ತಿಂಗಳಲ್ಲಿ `ರಾಜ್ಯ ಕಾಂಗ್ರೆಸ್ ಸರ್ಕಾರ ಪತನ’ : ಶಾಸಕ...

BIGG NEWS : ಇನ್ನು 6 ತಿಂಗಳಲ್ಲಿ `ರಾಜ್ಯ ಕಾಂಗ್ರೆಸ್ ಸರ್ಕಾರ ಪತನ’ : ಶಾಸಕ ಯತ್ನಾಳ್ ಬಾಂಬ್

 

ಬೆಳಗಾವಿ : ಏಳೆಂಟು ತಿಂಗಳು ಕಾಯಿರಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಬಳಿಕ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಔತಣಕೂಟ ಸಭೆಯಲ್ಲಿ ಮಾತನಾಡಿದ ಯತ್ನಾಳ್ ಅವರು, ಏಳೆಂಟು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ. ಈಗಾಗಲೇ 25 ಶಾಸಕರು ಕಾಂಗ್ರೆಸ್ ತೊರೆಯಲು ಸಿದ್ದರಾಗಿದ್ದಾರೆ. ಆದರೆ ಸರ್ಕಾರ ಬೀಳಬೇಕಾದರೆ 30 ರಿಂದ 40 ಶಾಸಕರು ಬೇಕು.  ಗ್ಯಾರಂಟಿ ಯೋಜನೆಗಳಿಂದ ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಆಡಳಿತ ಪಕ್ಷದ ಶಾಸಕರಿಗೆ ಅನುದಾನ ಈಗ ಕೇಳಿಬೇಡಿ ಅಂತಿದ್ದಾರೆ. ಇನ್ನೂ ಏಳೆಂಟು ತಿಂಗಳ ಕಾಯಿರಿ ನಮ್ಮದೇ ಸರ್ಕಾರ ಬರುತ್ತೆ ಎಂದು ಶಾಸಕರು ಭವಿಷ್ಯ ನುಡಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ದುಡ್ಡು ಮಾಡಿಕೊಳ್ಳಲು ಪೈಪೋಟಿ ನಡೆಸಿದ್ದಾರೆ. ನನ್ನದು ಇದು ಕೊನೆಯ ಅವಕಾಶ ಎಂದು ಸಿದ್ದರಾಮಯ್ಯ ದುಡ್ಡು ಮಾಡಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಸಿದ್ದರಾಮಯ್ಯರನ್ನು ತೆಗೆದು ಸಿಎಂ ಆಗಬೇಕು ಎಂದು ಡಿ.ಕೆ ಶಿವಕುಮಾರ್ ಹೊರಟಿದ್ದಾರೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular