HomeKarnatakaIndependence Day : ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರು ಸಿದ್ಧ : 9 ಗಂಟೆಗೆ ಸಿಎಂ ಸಿದ್ದರಾಮಯ್ಯ...

Independence Day : ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರು ಸಿದ್ಧ : 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ಬೆಂಗಳೂರು ನಗರ ಜಿಲ್ಲೆ : ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಆಗಸ್ಟ್ 15 ರ ಇಂದು ಬೆಳಗ್ಗೆ 8.58 ಕ್ಕೆ ಮಾನ್ಯ ಮುಖ್ಯಮಂತ್ರಿಗಳು ಮೈದಾನದಕ್ಕೆ ಆಗಮಿಸಲಿದ್ದು, 9.00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಣದ ನಂತರ ಮಾನ್ಯ ಮುಖ್ಯಮಂತ್ರಿಗಳ ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಲಿದ್ದಾರೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಂಥಸಂಚಲನದಲ್ಲಿ ಕೆ.ಎಸ್.ಆರ್.ಪಿ, ಸಿ.ಆರ್.ಪಿ.ಎಫ್, ಬಿ.ಎಸ್.ಎಫ್, ಸಿ.ಎ.ಆರ್, ಕೆ.ಎಸ್.ಐ.ಎಸ್,ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾರ್ಡ್‍ , ಟ್ರಾಫಿಕ್ ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ವಾಡ್ ಮತ್ತು ಬ್ಯಾಂಡ್ ನ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೋಳಗೊಂಡಂತೆ ಕವಾಯತು ಸೇರಿ ಒಟ್ಟು 38 ತುಕಡಿಗಳಲ್ಲಿ ಸುಮಾರು 1,350 ಮಂದಿ ಭಾಗವಹಿಸಲಿದ್ದಾರೆ.

ಪದ ದೇವರಾಜ್ ಅವರ ತಂಡದಿಂದ ನಾಡಗೀತೆ ಮತ್ತು ರೈತ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬೆಂಗಳೂರು ದಕ್ಷಿಣ ವಲಯದ ಜೆ.ಪಿ.ನಗರದ ಕರ್ನಾಟಕ ಪಬ್ಲಿಕ್ ಶಾಲೆಯ 750 ಮಕ್ಕಳು “ವೀರ ನಮನ” ನೃತ್ಯ ಪ್ರದರ್ಶಿಸಲಿದ್ದಾರೆ.

ಬೆಂಗಳೂರು ಉತ್ತರ ವಲಯದ ಹೇರೋಹಳ್ಳಿಯ ಬಿ.ಬಿ.ಎಂ.ಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 700 ಮಕ್ಕಳಿಂದ ‘ವೀರ ಭೂಮಿ ವಿಧುರಾಶ್ವತ್ಥ ಧ್ವಜ ಸತ್ಯಾಗ್ರಹ’ ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 50 ಮಕ್ಕಳಿಂದ ‘ರೋಪ್ ಸ್ಕಿಪಿಂಗ್’ ಕಾರ್ಯಕ್ರಮಗಳನ್ನು ನಡೆಸಿಕೊಳ್ಳಲಿದ್ದಾರೆ ಹಾಗೂ ಎಂ.ಇ. ಜಿ ಸೆಂಟರ್ ತಂಡದವರು “ಕಲಾರಿಪಯಟ್ಟು”, ಎ.ಎಸ್.ಸಿ ತಂಡದವರಿಂದ “ಟೆಂಟ್ ಪೆಗ್ಗಿಂಗ್” ಹಾಗೂ ಎ.ಎಸ್.ಸಿ ತಂಡ ಇವರಿಂದ “ಮೊಟರ್ ಸೈಕಲ್” ಸಹಾಸ ಪ್ರದರ್ಶನವನ್ನು ಮಾಡಲಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ, ಇತರೆ ಸಾರ್ವಜನಿಕರಿಗೆ ಪ್ರತ್ಯೋಕ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಯಾವುದೇ ಆಕಸ್ಕಿಕ ವಿಪತ್ತು ಸಂಭವಿಸಿದಲ್ಲಿ ಅಗತ್ಯವಿರುವಷ್ಟು ಆಂಬುಲೆನ್ಸ್, ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಹಾಗೂ ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.

ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಮಾತನಾಡಿ ಸ್ವತಂತ್ರ್ಯ ದಿನಾಚರಣೆಗಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಸುಮಾರು 1,000 ಕ್ಕು ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆ ಕಾರ್ಯಕ್ಕೆ ನಿಯೋಜಿಸಲಾಗಿದೆ. ಬೆಂಗಳೂರು ನಗರದ ಎಲ್ಲಾ ವಿಭಾಗಗಳಿಂದ 9 ಡಿ.ಸಿ.ಪಿ, 15 ಎ.ಸಿ.ಪಿ, 43 ಪಿ.ಐ, 110 ಪಿಎಸ್ ಐ/ ಮ.ಪಿಎಸ್ ಐ, 72 ಎ.ಎಸ್.ಐ, 554 ಹೆಚ್.ಸಿ/ಪಿ.ಸಿ ಮತ್ತು 70 ಮಹಿಳಾ ಸಿಬ್ಬಂದಿಗಳೊಂದಿಗೆ 157 ಸಾದಾ ಉಡುಪಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಮತ್ತು 56 ಕ್ಯಾಮರಾ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಮೈದಾನದ ಬಂದೋಬಸ್ತ್ ಕರ್ತವ್ಯಕ್ಕಾಗಿ 10 ಕೆ.ಎಸ್.ಆರ್.ಪಿ ಸಿ.ಎ.ಆರ್ ತುಕಡಿಗಳು, 2 ಅಗ್ನಿ ಶಾಮಕ ವಾಹನಗಳು, 2 ಅಂಬುಲೆನ್ಸ್, 4 ಖಾಲಿ ವಾಹನಗಳು, 1 ಕ್ಷಿಪ್ರ ಕಾರ್ಯಾಚರಣೆ ಪಡೆ (ಕ್ಯೂ,ಆರ್.ಟಿ), 1 ಡಿ ಸ್ವಾಟ್, 1 ಆರ್.ಐ.ವಿಗಳನ್ನು ಭದ್ರತ ವ್ಯವಸ್ಥೆಗೆ ನಿಯೋಜಿಸಲಾಗಿದೆ ಎಂದರಲ್ಲದೆ ಒಂದು ಗರುಡ ಫೋರ್ಸ್ ಅನ್ನು ಕಾಯ್ದಿರಿಸಲಾಗಿದೆ.

ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ 100 ಸಿಸಿ ಕ್ಯಾಮೆರಾ ವ್ಯವಸ್ಥೆ ಹಾಗೂ 3 ಬ್ಯಾಗೇಜ್ ಸ್ಕ್ಯಾನರ್ , 20 ಡಿ.ಎಫ್.ಎಂ.ಡಿ ಮತ್ತು 40 ಹೆಚ್. ಹೆಚ್.ಎಂ.ಡಿ ಗಳನ್ನು ಅಳವಡಿಸಲಾಗಿದೆ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿದೆ. ಆಕಸ್ಕಿಕ ಬೆಂಕಿ ಅವಘಡಗಳನ್ನು ನಿಭಾಯಿಸಲು ಅಗ್ನಿ ಶಾಮಕ ವಾಹನಗಳೊಂದಿಗೆ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ಪಾಸು ಮತ್ತು ಗುರುತಿನ ಚೀಟಿಯನ್ನು ಹೊಂದಿರಬೇಕು. ಪರ್ಸ್ ಮತ್ತು ಮೊಬೈಲ್ ಹೊರೆತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಾರ್ಯಕ್ರಮಕ್ಕೆ ತರದಂತೆ ನಿಷೇಧಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular