ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು ಲಕ್ಷಣಗಳು ಗೋಚರಿಸತೊಡಗಿವೆ. ಆಗಸ್ಟ್ 19 ರಿಂದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಈ ಬಗ್ಗೆ ಮುನ್ಸೂಚನೆ ನೀಡಿದ್ದು, ಆಗಸ್ಟ್ 19ರಿಂದ 21ರ ವರೆಗೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗಲಿದೆ ಎಂದು ಹೇಳಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ತುಮಕೂರು, ಚಿತ್ರದುರ್ಗ, ಕೋಲಾರ, ರಾಯಚೂರು, ಕೊಪ್ಪಳ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.