HomeKarnatakaಸ್ವಾತಂತ್ರ್ಯ ದಿನಾಚರಣೆ : ಗಾಂಧಿ ಟೋಪಿ, ಬಿಳಿ ಬಟ್ಟೆ ಧರಿಸಿ ಮಿಂಚಿದ 'ಸಿಎಂ ಸಿದ್ದರಾಮಯ್ಯ'

ಸ್ವಾತಂತ್ರ್ಯ ದಿನಾಚರಣೆ : ಗಾಂಧಿ ಟೋಪಿ, ಬಿಳಿ ಬಟ್ಟೆ ಧರಿಸಿ ಮಿಂಚಿದ ‘ಸಿಎಂ ಸಿದ್ದರಾಮಯ್ಯ’

ಬೆಂಗಳೂರು : ಇಂದು ದೇಶದೆಲ್ಲೆಡೆ ಸ್ವಾತಂತ್ರ್ಯ  ದಿನಾಚರಣೆಯ ಸಂಭ್ರಮ. ಎಲ್ಲೆಡೆ ರಾಷ್ಟ್ರದ ತ್ರಿವಣ ಧ್ವಜ ಹಾರಾಡುತ್ತಿದೆ. ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಸಖತ್ ಮಿಂಚಿದ್ದಾರೆ.

ಗಾಂಧಿ ಟೋಪಿ, ಬಿಳಿ ಬಟ್ಟೆ ಧರಿಸಿ ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನಕ್ಕೆ ಸಿಎಂ ಎಂಟ್ರಿ ಕೊಟ್ಟರು. ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

ಸಿಎಂ ಭಾಷಣದ ಹೈಲೆಟ್ಸ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ ಧ್ವಜಾರೋಹಣದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ್ದು, ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದು, ಜನರಿಗೆ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ರಾಜ್ಯ ಸರ್ಕಾರ ಬಡತನ ನಿರ್ಮೂಲನೆ ಕೆಲಸ ಮಾಡುತ್ತಿದೆ. ನಾವು ಈಗಾಗಲೇ ನೀಡಿರುವ ಆಶ್ವಾಸನೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಆಗಸ್ಟ್ 27 ರಂದು ಗೃಹಲಕ್ಷ್ಮೀ ಯೋಜನೆ ಹಣ ಮಹಿಳೆಯರ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.
ಹಸಿವು ಮುಕ್ತ ಕರ್ನಾಟಕ ಮಾಡಲು ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗಿದ್ದು, 5 ಕೆಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದರು.

ಗೃಹಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬಂದಿದ್ದು, ಆಗಸ್ಟ್ 1 ರ ಬಿಲ್ನಿಂದ ಗ್ರಾಹಕರಿಗೆ ಸೌಲಭ್ಯ ದೊರೆಯುತ್ತಿದೆ. ಸುಮಾರು 2 ಕೋಟಿ ಗ್ರಾಹಕರಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ಇದುವರೆಗೆ 1.49 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಬಾಡಿಗೆದಾರರಿಗೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಇದಕ್ಕಾಗಿ ವಾರ್ಷಿಕವಾಗಿ 13,910 ಕೋಟಿ ರೂ.ಗಳಷ್ಟು ವಿನಿಯೋಗಿಸಲಾಗುತ್ತಿದೆ ಎಂದರು.

ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ನಮ್ಮ ಸರ್ಕಾರವು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು, ಯೋಜನೆಯಡಿ ಪ್ರತಿ ಫಲಾನುಭವಿಗೆ ಕೇಂದ್ರವು ನೀಡುವ 5 ಕೆಜಿ ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲು ಕ್ರಮ ತೆಗೆದುಕೊಳ್ಳುತ್ತಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಗದು ವರ್ಗಾಯಿಸಲು ನಿರ್ಧರಿಸಿದ್ದು, ಈ ವರೆಗೆ 1.04 ಕೋಟಿ ಕುಟುಂಬಗಳು ನಗದು ಸೌಲಭ್ಯ ಪಡೆಯುತ್ತಿವೆ. ಉಳಿದ ಕುಟುಂಬಗಳಿಗೆ ಸದ್ಯದಲ್ಲಿಯೇ ಹಣ ವರ್ಗಾಯಿಸಲು ಕ್ರಮ ಕೈಗೊಳ್ಳಲಿದ್ದೇವೆ.

ನಮ್ಮ ಸರ್ಕಾರ ‘ಗೃಹಲಕ್ಷ್ಮಿ’ ಯೋಜನೆಯನ್ನು ಜಾರಿಗೆ ತರುತ್ತಿದೆ. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ದಿನಾಂಕ ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಮಾಸಿಕ 2000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೆ 1.08 ಕೋಟಿ ಕುಟುಂಬಗಳ ಯಜಮಾನಿಯರು ನೋಂದಾಯಿಸಿಕೊಂಡಿದ್ದಾರೆ.ಪದವಿ, ಡಿಪ್ಲೊಮಾ ಪಡೆದ ಯುವಕರಿಗೆ ಯುವನಿಧಿ ಯೋಜನೆ ಜಾರಿಗೆ ತರಲಾಗಿದ್ದು, ಶಿಕ್ಷಣ ಪಡೆದು ಆರು ತಿಂಗಳಾದರೂ ಉದ್ಯೋಗ ದೊರೆಯದ ಯುವಜನರಿಗೆ ಉದ್ಯೋಗ ದೊರೆಯುವವರೆಗೆ ಅಥವಾ ಗರಿಷ್ಠ ಎರಡು ವರ್ಷದವರೆಗೆ, ಪದವೀಧರರಿಗೆ 3000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. 2022-23ರ ಶೈಕ್ಷಣಿಕ ವರ್ಷ ಅಂತ್ಯಗೊಂಡ 6 ತಿಂಗಳ ನಂತರ ಈ ಯೋಜನೆ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular