
ಮೃತರನ್ನು ಗೋಪಾಲ ಪಟಗಾರ (50) ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಧ್ವಜಾರೋಹಣಕ್ಕೆ ತೆರಳುತ್ತಿದ್ದಾಗ ಶಿಕ್ಷನಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಗುಡೇಅಂಗಡಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.ಘಟನೆ ನಡೆದ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

