HomeKarnatakaBIG NEWS : ಸರ್ಕಾರಿ ಕಚೇರಿಗಳಲ್ಲಿ 'ಸಂಗೊಳ್ಳಿ ರಾಯಣ್ಣ' ನ ಫೋಟೋ ಕಡ್ಡಾಯ, ಶೀಘ್ರವೇ ಅಧಿಕೃತ...

BIG NEWS : ಸರ್ಕಾರಿ ಕಚೇರಿಗಳಲ್ಲಿ ‘ಸಂಗೊಳ್ಳಿ ರಾಯಣ್ಣ’ ನ ಫೋಟೋ ಕಡ್ಡಾಯ, ಶೀಘ್ರವೇ ಅಧಿಕೃತ ಆದೇಶ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋವನ್ನು ಕಡ್ಡಾಯವಾಗಿ ಅಳವಡಿಸುವ ಕುರಿತು ಆದೇಶ ಹೊರಡಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋವನ್ನು ಕಡ್ಡಾಯವಾಗಿ ಅಳವಡಿಸುವ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುತ್ತದೆ ಎಂದರು.ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡುವ ವಿಚಾರವನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಕೆಲಸ ಮಾಡುತ್ತೇನೆ. ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡಲು ಕೃಷ್ಣಮೂರ್ತಿ ಕಾರಣವಾಗಿದ್ದಾರೆ. ಜೊತೆಗೆ, ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೂ ಕೃಷ್ಣಮೂರ್ತಿ ಕಾರಣವಾಗಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋವನ್ನು ಕಡ್ಡಾಯವಾಗಿ ಅಳವಡಿಸುವ ಕುರಿತು ಆದೇಶ ಹೊರಡಿಸಲಾಗುತ್ತದೆ ಎಂದರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಸರ್ಕಾರ ಬಡತನ ನಿರ್ಮೂಲನೆ ಕೆಲಸ ಮಾಡುತ್ತಿದೆ. ನಾವು ಈಗಾಗಲೇ ನೀಡಿರುವ ಆಶ್ವಾಸನೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಆಗಸ್ಟ್ 27 ರಂದು ಗೃಹಲಕ್ಷ್ಮೀ ಯೋಜನೆ ಹಣ ಮಹಿಳೆಯರ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.
ಹಸಿವು ಮುಕ್ತ ಕರ್ನಾಟಕ ಮಾಡಲು ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗಿದ್ದು, 5 ಕೆಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬಂದಿದ್ದು, ಆಗಸ್ಟ್ 1 ರ ಬಿಲ್ನಿಂದ ಗ್ರಾಹಕರಿಗೆ ಸೌಲಭ್ಯ ದೊರೆಯುತ್ತಿದೆ. ಸುಮಾರು 2 ಕೋಟಿ ಗ್ರಾಹಕರಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ಇದುವರೆಗೆ 1.49 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಬಾಡಿಗೆದಾರರಿಗೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಇದಕ್ಕಾಗಿ ವಾರ್ಷಿಕವಾಗಿ 13,910 ಕೋಟಿ ರೂ.ಗಳಷ್ಟು ವಿನಿಯೋಗಿಸಲಾಗುತ್ತಿದೆ ಎಂದರು.

ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ನಮ್ಮ ಸರ್ಕಾರವು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು, ಯೋಜನೆಯಡಿ ಪ್ರತಿ ಫಲಾನುಭವಿಗೆ ಕೇಂದ್ರವು ನೀಡುವ 5 ಕೆಜಿ ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲು ಕ್ರಮ ತೆಗೆದುಕೊಳ್ಳುತ್ತಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಗದು ವರ್ಗಾಯಿಸಲು ನಿರ್ಧರಿಸಿದ್ದು, ಈ ವರೆಗೆ 1.04 ಕೋಟಿ ಕುಟುಂಬಗಳು ನಗದು ಸೌಲಭ್ಯ ಪಡೆಯುತ್ತಿವೆ. ಉಳಿದ ಕುಟುಂಬಗಳಿಗೆ ಸದ್ಯದಲ್ಲಿಯೇ ಹಣ ವರ್ಗಾಯಿಸಲು ಕ್ರಮ ಕೈಗೊಳ್ಳಲಿದ್ದೇವೆ ಎಂದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular