alex Certify ವ್ಹೀಲಿಂಗ್ ವೇಳೆ ಎರಡು ಬೈಕ್ ಡಿಕ್ಕಿಯಾಗಿ ಯುವತಿ ಸಾವು: ಇಬ್ಬರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಹೀಲಿಂಗ್ ವೇಳೆ ಎರಡು ಬೈಕ್ ಡಿಕ್ಕಿಯಾಗಿ ಯುವತಿ ಸಾವು: ಇಬ್ಬರಿಗೆ ಗಾಯ

ಬೆಂಗಳೂರು: ವ್ಹೀಲಿಂಗ್ ಮಾಡುವಾಗ ಎರಡು ಬೈಕ್ ಗಳು ಡಿಕ್ಕಿಯಾಗಿ ಯುವತಿ ಮೃತಪಟ್ಟಿದ್ದು, ಮತ್ತೋರ್ವ ಯುವತಿ ಹಾಗೂ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ಘಟನೆ ನಡೆದಿದೆ. ಬೆಂಗಳೂರಿನಿಂದ ಕೋಲಾರದ ಕಾಫಿ ಡೇ ಕಡೆಗೆ ಗ್ಯಾಂಗ್ ಒಂದು ಗುಂಪು ಗುಂಪಾಗಿ ಬಂದಿದೆ. 20ಕ್ಕೂ ಹೆಚ್ಚು ಯುವಕರು, ಯುವತಿಯರು ಬೈಕ್ ಗಳಲ್ಲಿ ಬಂದಿದ್ದರು.

ವ್ಹೀಲಿಂಗ್ ಮಾಡಿಕೊಂಡು ಹೋಗುತ್ತಿದ್ದ ಬೈಕ್ ಗೆ ಮತ್ತೊಂದು ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಹಿಂದೆ ಕುಳಿತಿದ್ದ ಯುವತಿ ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಗಾಯಗೊಂಡ ಮತ್ತಿಬ್ಬರನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಯುವತಿ ಗುರುತು ಇನ್ನೂ ಪತ್ತೆಯಾಗಿಲ್ಲ. ಅಪಘಾತದ ಬಳಿಕ ಜೊತೆಯಲ್ಲಿದ್ದ ಸ್ನೇಹಿತರು ಬೈಕ್ ಸಮೇತ ಪರಾರಿಯಾಗಿದ್ದಾರೆ. ಬೆಳಗ್ಗೆಯಿಂದ ಹೆದ್ದಾರಿಯಲ್ಲಿ ವ್ಹೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದೆ. ಹೊಸಕೋಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...