ತುಮಕೂರು : ಕನ್ನಡಿಗರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಹೆಚ್.ಎ.ಎಲ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು.
ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯದಲ್ಲಿ ದೇಶದಲ್ಲಿ ಅನೇಕ ಘಟನಾವಳಿಗಳು ನಡೆದಿವೆ. ಪ್ರಜಾಪ್ರಭುತ್ವ ಉಳಿಸಿಕೊಳ್ಳಬೇಕು. ಸಂವಿಧಾನಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು ಎಂದರು. ಸ್ಥಳೀಯ ಕನ್ನಡಿಗರಿಗೆ ಎಚ್.ಎ.ಎಲ್ ನಲ್ಲಿ ಉದ್ಯೋಗ ಆದ್ಯತೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು. ಹೆಚ್.ಎ.ಎಲ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ರಾಜ್ಯದ 5 ರಿಂದ 11 ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ.. ಈ ಬಗ್ಗೆ ಅಂಕಿ ಅಂಶ ತರಿಸಿಕೊಂಡು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುತ್ತೇವೆ . ರಾಜ್ಯದಲ್ಲಿ ಜಲ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ, ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಿದೆ ಎಂದರು.