HomeKarnatakaಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಮತ್ತೆ 15 ಸಾವಿರ `ಅತಿಥಿ ಶಿಕ್ಷಕ'ರ ನೇಮಕ|Guest...

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಮತ್ತೆ 15 ಸಾವಿರ `ಅತಿಥಿ ಶಿಕ್ಷಕ’ರ ನೇಮಕ|Guest Teachers

ಬೆಂಗಳೂರು: ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಮತ್ತೆ 15 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಲು ಮುಂದಾಗಿದೆ. 

ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಶಿಕ್ಷಕರ ವರ್ಗಾವಣೆ ನಿಯಂತ್ರಣ -2020 ತಿದ್ದುಪಡಿ ಕಾಯ್ದೆ ಜಾರಿಯಾದ ನಂತರ ರಾಜ್ಯದ ಸರ್ಕಾರಿ ಶಾಲೆಗಳ 30,629 ಶಿಕ್ಷಕರ ವರ್ಗಾವಣೆ ಪ್ರಯೋಜನ ಪಡೆದುಕೊಂಡಿದ್ದಾರೆ. ಶಿಕ್ಷಕರ ವರ್ಗಾವಣೆಯಿಂದ ತೆರವಾಗುವ ಸ್ಥಾನಗಳಿಗೆ ಮತ್ತೆ 15 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಈ ಕುರಿತಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 35,000 ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿತ್ತು. ವರ್ಗಾವಣೆಯಾದ ಸ್ಥಳಗಳಿಗೆ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ಪ್ರಕ್ರಿಯೆ ಪೂರ್ಣಗೊಂಡ ನಂತರ ಉತ್ತರ ಕರ್ನಾಟಕ, ಮಲೆನಾಡು ಭಾಗದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹೆಚ್ಚಾಗಲಿದೆ. ಹೀಗಾಗಿ ಮತ್ತೆ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ.

ಈಗಾಗಲೇ ವರ್ಗಾವಣೆಯಾದ ಶಿಕ್ಷಕರು ಕೆಲವು ಜಿಲ್ಲೆಗಳಲ್ಲಿ ತಾವು ಆಯ್ಕೆ ಮಾಡಿಕೊಂಡ ಶಾಲೆಗಳಿಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮತ್ತೆ ಕೆಲವೆಡೆ ಕಾಯಂ ಶಿಕ್ಷಕರು ಇಲ್ಲದ ಕಾರಣ ಬದಲಿ ವ್ಯವಸ್ಥೆ ಮಾಡುವವರೆಗೆ ಕರ್ತವ್ಯದಿಂದ ಬಿಡುಗಡೆ ಮಾಡಿದಂತೆ ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular