ತುಮಕೂರು : ರಾಜ್ಯದಲ್ಲಿ 7 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈ ಜಿಲ್ಲೆಗಳ ಸರ್ಕಾರ ಅಂಕಿ ಅಂಶಗಳನ್ನು ಪರಿಶೀಲಿಸಿ ಮುಂದಿನ ಕ್ಯಾಬಿನೆಟ್ ನಲ್ಲಿ ಬರಪೀಡಿತ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಗಿದ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು, ನಾನು ಹಲವು ವರ್ಷಗಳಿಂದ ನೋಡಿದ ಸ್ವಾತಂತ್ರ್ಯ ದಿನಾಚರಣೆಗಳಲ್ಲಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ 77 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ತುಂಬಾ ವಿಜೃಂಭಣೆಯಿಂದ ಹಾಗೂ ವ್ಯವಸ್ಥಿತವಾಗಿ ಜಿಲ್ಲಾಡಳಿತ ಆಯೋಜನೆ ಮಾಡಿದ್ದಾರೆ ಎಂದರು.
ತುಮಕೂರು ನಗರಕ್ಕೆ ತನ್ನದೇ ಆದ ಇತಿಹಾಸವಿದೆ ಅದನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು. ನಗರದ ಸ್ವತಂತ್ರ ಚೌಕದಲ್ಲಿ ಬ್ರಿಟಿಷ್ ಅವರು ನಮ್ಮ ಸ್ವತಂತ್ರ ಯೋಧರ ಮೇಲೆ ಗುಂಡು ಹಾರಿಸಿದ ಸ್ಥಳವಾಗಿದೆ ಎಂದರು.
ಸ್ವಾತAತ್ರ್ಯ ಬಂದ ನಂತರ ಸ್ವಾತಂತ್ರ್ಯಕ್ಕಾಗಿ ನಡೆದ ಹಲವು ಹೋರಾಟ ಮತ್ತು ಬಲಿದಾನಗಳನ್ನು ನಾವೆಲ್ಲರೂ ಸ್ಮರಿಸಿಕೊಳ್ಳುವುದರ ಜೊತೆಗೆ ಮುಂದಿನ ಪೀಳಿಗೆಯವರಿಗೂ ಇತಿಹಾಸವನ್ನು ತಿಳಿಸಬೇಕು ಎಂದರು.
ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ದೇಶಕ್ಕೆ ನೀ ಡಿರುವ ಸಂವಿಧಾನವನ್ನು ಉಳಿಸಿಕೊಳ್ಳುವುದರ ಜೊತೆಗೆ ಪ್ರಜಾಪ್ರಭುತ್ವಕ್ಕೆ ಹಾಗೂ ಸಂವಿಧಾನಕ್ಕೇ ಯಾವುದೇ ರೀತಿಯಲ್ಲಿ ದಕ್ಕೆ ಬರದ ಹಾಗೇ ನೋಡಿಕೊಳ್ಳಬೇಕು. ಮುಂದಿನ ಪೀಳಿಗೆ ಶಾಂತಿಯಿAದ ಜೀವನ ನಡೆಸುವ ಅವಕಾಶವನ್ನು ಸೃಷ್ಟಿ ಮಾಡಿಕೊಡಬೇಕಾಗಿದೆ ಎಂದರು.
ಸ್ವಾತAತ್ರ್ಯ ದಿನಾಚರಣೆಯನ್ನು ತುಂಬಾ ವಿಜೃಂಭಣೆಯಿAದ ಆಚರಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳಿಗೆ ನೀಡಿದ್ದ ಒಳ್ಳೆಯ ಅವಕಾಶವನ್ನು ಬಳಸಿಕೊಂಡು ಆ ಶಾಲೆಯ ಸಾವಿರಾರು ಮಕ್ಕಳು ದೇಶಭಕ್ತಿ ಗೀತೆಗಳಿಗೆ ನೃತ್ಯ ಮಾಡುವುದರ ಮೂಲಕ ಅವರಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಬೀಜವನ್ನು ಬಿತ್ತಿದ್ದೇವೆ. ಆ ಘಟನೆ ಅವರಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದರು.
ಸಾಮಾನ್ಯವಾಗಿ ಸರ್ಕಾರಿ ಶಾಲೆ ಎಂದ ತಕ್ಷಣ ಬೇರೆ ರೀತಿಯಲ್ಲಿ ಕಲ್ಪನೆ ಮಾಡಿಕೊಳ್ಳುವ ಕಾಲದಲ್ಲಿ ನಮ್ಮ ಎಂಪ್ರೆಸ್ ಶಾಲೆಯ ೮೦೦ ವಿದ್ಯಾರ್ಥಿನಿಯರು ಒಟ್ಟಿಗೆ ಸೇರಿ ನೃತ್ಯ ಮಾಡಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.
ಊಂಐ ಕೈಗಾರಿಕೆಯಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲು ಉದ್ಯೋಗ ವಿನಿಮಯ ಕಚೇರಿಯ ಮೂಲಕ ಮಾಹಿಯನ್ನು ತೆಗೆದು ಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕೈಗಾರಿಕಾ ಸ್ಥಾಪಿಸಲು ಜಮೀನು ನೀಡಿರುವ ರೈತರ ಮಕ್ಕಳಿಗೂ ವಿದ್ಯಾರ್ಹತೆ ಆಧಾರದ ಮೇಲೆ ಉದ್ಯೋಗ ನೀಡುವಂತೆ ಊಂಐ ಮುಖ್ಯಸ್ಥರ ಜೊತೆ ಚರ್ಚಿಸಲಾಗಿದೆ ಎಂದು ತಿಳಿಸಿದರು.