Good News : `ಕೃಷಿ ಭಾಗ್ಯ, ಅನುಗ್ರಹ, ವಿದ್ಯಾಸಿರಿ’ ಯೋಜನೆ ಮರುಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಜನಪ್ರಿಯ ಮತ್ತು ಯಶಸ್ವಿ ಯೋಜನೆಗಳಾದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ ಯೋಜನೆಗಳನ್ನು ಮರು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ  ಧ್ವಜಾರೋಹಣದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು,ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಲಾದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಯೋಜನೆಗಳನ್ನು ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ಮಾಡಿ ಎಸ್ಸಿ, ಎಸ್ಟಿ ಗೆ ಹಂಚಿಕೆ ಮಾಡಿದ ಭೂಮಿ ಪರಭಾರೆ ವಿರುದ್ಧ ದೂರು ನೀಡುವ ಕಾಲಮಿತಿ ರದ್ದುಪಡಿಸಲಾಗಿದೆ. ಎಸ್,ಎಸ್ಟಿಗೆ ಮೀಸಲಿಟ್ಟ ಅನುದಾನವನ್ನು ಇತರೆ ಕಾರ್ಯಗಳಿಗೆ ದುರ್ಬಳಕೆ ತಡೆಗಟ್ಟಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read