BIGG NEWS : ರಾಜ್ಯದಲ್ಲಿ 14 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಪ್ರತಿ ವರ್ಷ 1.4 ಲಕ್ಷ ಕೋಟಿ ರೂ.ಬಂಡವಾಳ ಆಕರ್ಷಿಸುವ ಮೂಲಕ 14 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ 77 ನೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ  ಧ್ವಜಾರೋಹಣದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಭವಿಷ್ಯದ ತಂತ್ರಜ್ಞಾನ ಅತ್ಯಾಧುನಿಕ ಉತ್ಪಾದನಾ ವಲಯವನ್ನು ಸಮಾನ ಮತ್ತು ಸುಸ್ಥಿರ ಬೆಳವಣಿಗೆಯ ಮೂಲಕ ಏಷ್ಯಾದಲ್ಲೇ ಮೊದಲ ಸ್ಥಾನಕ್ಕೆ ಒಯ್ಯುವ ಗುರಿ ನಮ್ಮದಾಗಿದೆ. ಕಳೆದ 10 ವರ್ಷದಲ್ಲಿ ರಾಜ್ಯದ ಕೈಗಾರಿಕಾ ವಲಯವು ಶೇ.9.3 ರ ದರದಲ್ಲಿ ಬೆಳವಣಿಗೆ ಇದೆ ಎಂದರು.

ರಾಜ್ಯದಲ್ಲಿ ಪ್ರತಿ ವರ್ಷ 1.4 ಲಕ್ಷ ಕೋಟಿ ರೂ. ಬಂಡವಾಳ ಆಕರ್ಷಿಸುವ ಮೂಲಕ 14 ಲಕ್ಷ ಹೊಸಉದ್ಯೋಗ ಸೃಷ್ಟಿಸುವ ಗುರಿ ಹೊಂದಿದ್ದೇವೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಲಾದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಯೋಜನೆಗಳನ್ನು ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ. ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ಮಾಡಿ ಎಸ್ಸಿ, ಎಸ್ಟಿ ಗೆ ಹಂಚಿಕೆ ಮಾಡಿದ ಭೂಮಿ ಪರಭಾರೆ ವಿರುದ್ಧ ದೂರು ನೀಡುವ ಕಾಲಮಿತಿ ರದ್ದುಪಡಿಸಲಾಗಿದೆ. ಎಸ್,ಎಸ್ಟಿಗೆ ಮೀಸಲಿಟ್ಟ ಅನುದಾನವನ್ನು ಇತರೆ ಕಾರ್ಯಗಳಿಗೆ ದುರ್ಬಳಕೆ ತಡೆಗಟ್ಟಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read