HomeKarnatakaಕಾಂಗ್ರೆಸ್ ಶಾಸಕರ ಅಸಮಾಧಾನ ತಣಿಸಲು ಇಂದಿನಿಂದ ಮತ್ತೆ ಸಭೆ

ಕಾಂಗ್ರೆಸ್ ಶಾಸಕರ ಅಸಮಾಧಾನ ತಣಿಸಲು ಇಂದಿನಿಂದ ಮತ್ತೆ ಸಭೆ

ಬೆಂಗಳೂರು: ಕಾಂಗ್ರೆಸ್ ಶಾಸಕರ ಅಹವಾಲು ಆಲಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಮೂರು ದಿನ ಸತತವಾಗಿ ಜಿಲ್ಲಾ ಮಟ್ಟದ ಶಾಸಕರು, ಸಚಿವರ ಸಭೆ ನಡೆಸಿದ್ದರು.

ಬುಧವಾರದಿಂದ ಮತ್ತೆ ಜಿಲ್ಲಾ ಮಟ್ಟದ ಸಭೆಗೆ ಚಾಲನೆ ನೀಡಲಾಗುತ್ತದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮೂರು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಗಳ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ ಜಿಲ್ಲೆ, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳು, ಅನುದಾನ ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಸರ್ಕಾರಿ ಅಧಿಕಾರಿಗಳ ವರ್ಗಾವಣೆಯಲ್ಲಿ ಸ್ಥಳೀಯ ಶಾಸಕರನ್ನು ಪರಿಗಣಿಸುತ್ತಿಲ್ಲ. ಸಚಿವರು ತಮ್ಮನ್ನು ಕಡೆಗಣಿಸುತ್ತಿದ್ದಾರೆ ಹಾಗೂ ಅನುದಾನ ಬಿಡುಗಡೆಯಾಗಿಲ್ಲ ಎಂಬುದರ ಬಗ್ಗೆ ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಜಿಲ್ಲಾವಾರು ಸಭೆ ನಡೆಸಿ ಶಾಸಕರ ಅಹವಾಲು ಆಲಿಸುತ್ತಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular