ಬೆಂಗಳೂರು : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡುವ ವಿಚಾರವನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಕೆಲಸ ಮಾಡುತ್ತೇನೆ. ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡಲು ಕೃಷ್ಣಮೂರ್ತಿ ಕಾರಣವಾಗಿದ್ದಾರೆ. ಜೊತೆಗೆ, ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೂ ಕೃಷ್ಣಮೂರ್ತಿ ಕಾರಣವಾಗಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋವನ್ನು ಕಡ್ಡಾಯವಾಗಿ ಅಳವಡಿಸುವ ಕುರಿತು ಆದೇಶ ಹೊರಡಿಸಲಾಗುತ್ತದೆ ಎಂದರು.
ರಾಜ್ಯ ಸರ್ಕಾರ ಬಡತನ ನಿರ್ಮೂಲನೆ ಕೆಲಸ ಮಾಡುತ್ತಿದೆ. ನಾವು ಈಗಾಗಲೇ ನೀಡಿರುವ ಆಶ್ವಾಸನೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಆಗಸ್ಟ್ 27 ರಂದು ಗೃಹಲಕ್ಷ್ಮೀ ಯೋಜನೆ ಹಣ ಮಹಿಳೆಯರ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.