HomeIndiaಮಕ್ಕಳಾಗದ ದಂಪತಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಆಸ್ಪತ್ರೆಗಳಲ್ಲೂ ಉಚಿತ ಐವಿಎಫ್ ಚಿಕಿತ್ಸೆ

ಮಕ್ಕಳಾಗದ ದಂಪತಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಆಸ್ಪತ್ರೆಗಳಲ್ಲೂ ಉಚಿತ ಐವಿಎಫ್ ಚಿಕಿತ್ಸೆ

ಪಣಜಿ: ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಫಲವಂತಿಕೆ -ಐವಿಎಫ್ ಚಿಕಿತ್ಸೆಯನ್ನು ಉಚಿತವಾಗಿ ಕಲ್ಪಿಸುವ ಮೂಲಕ ಗೋವಾ ರಾಜ್ಯ ಮಹತ್ವದ ಯೋಜನೆ ಆರಂಭಿಸಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಫಲವಂತಿಕೆ ಚಿಕಿತ್ಸೆಯನ್ನು ಉಚಿತವಾಗಿ ನೀಡುವ ಮೊದಲ ರಾಜ್ಯವಾಗಿ ಗೋವಾ ಹೊರಹೊಮ್ಮಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೋವಾದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಐವಿಎಫ್ ಚಿಕಿತ್ಸೆ ನೀಡಲಾಗುವುದು. ಇದರೊಂದಿಗೆ ಎ.ಆರ್.ಟಿ., ಮತ್ತು ಐಯುಐ ಸೌಲಭ್ಯಗಳನ್ನು ಕೂಡ ನೀಡಲಿದ್ದು, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬಂಬೋಲಿಮ್ ನಲ್ಲಿರುವ ಗೋವಾ ಮೆಡಿಕಲ್ ಕಾಲೇಜಿನಲ್ಲಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಭಾರತದಲ್ಲಿ ಐವಿಎಫ್ ಚಿಕಿತ್ಸೆ ದುಬಾರಿಯಾಗಿದೆ. ಆಸ್ಪತ್ರೆ ಮತ್ತು ಐವಿಎಫ್ ಚಿಕಿತ್ಸೆ ವಿಧಾನ ಅವಲಂಬಿಸಿ ಪ್ರತಿಸಲ 70 ಸಾವಿರ ರೂ. ನಿಂದ 3 ಲಕ್ಷ ರೂಪಾಯಿವರೆಗೆ ವೆಚ್ಚವಾಗುತ್ತಿದೆ ಎನ್ನಲಾಗಿದ್ದು, ಗೋವಾ ಸರ್ಕಾರದಿಂದ ಉಚಿತವಾಗಿ ಐವಿಎಫ್ ಸೌಲಭ್ಯ ಕಲ್ಪಿಸಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ 100 ಪೋಷಕರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular