BIGG NEWS : ಬೆಂಗಳೂರಿನಲ್ಲಿ `ಪೋಕ್ಸೋ ಪ್ರಕರಣ’ ಹೆಚ್ಚಳ : ಒಂದೇ ತಿಂಗಳಲ್ಲಿ 24 ಕೇಸ್ ದಾಖಲು!

ಬೆಂಗಳೂರು : ಬೆಂಗಳೂರಿನಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಂದೇ ತಿಂಗಳಲ್ಲಿ 24 ಪೋಕ್ಸೋ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ಕಳೆದ 1 ತಿಂಗಳ ಅವಧಿಯಲ್ಲಿ 24 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಶೋಷಣೆ ತಡೆಯುವ ನಿಟ್ಟಿನಲ್ಲಿಪೋಕ್ಸೊ ಕಾಯ್ದೆ ಜಾರಿಯಾಗಿದ್ದರೂ, ಬೆಂಗಳೂರಿನಲ್ಲಿ ಮೇಲಿನ ದೌರ್ಜನ್ಯ, ಅತ್ಯಾಚಾರ, ಶೋಷಣೆ ಹೆಚ್ಚುತ್ತಲೇ ಇವೆ.

18 ವರ್ಷದೊಳಗಿನ ಮಕ್ಕಳ ಉದ್ದೇಶದಿಂದ ಜಾರಿಗೆ ತಂದಿರುವ ಪೋಕ್ಸೊ (ಪ್ರೊಟೆಕ್ಷನ್‌ ಆಫ್‌ ಚಿಲ್ಡ್ರನ್‌ ಫ್ರಮ್‌ ಸೆಕ್ಷುಯಲ್‌ ಅಫೆನ್ಸಸ್‌) ಕಾಯ್ದೆಯಡಿ ಮಕ್ಕಳ ಮೇಲಿನ ಅತ್ಯಾಚಾರ, ಶೋಷಣೆ ತಡೆಯುವುದು, ದೌರ್ಜನ್ಯ ಎಸಗಿದವರಿಗೆ ಶಿಕ್ಷೆ ವಿಧಿಸುವ ಕೆಲಸವಾಗುತ್ತಿದೆ. ಈ ಬಗ್ಗೆ ಅರಿವಿದ್ದರೂ ದೌರ್ಜನ್ಯ ಕಡಿಮೆಯಾಗಿಲ್ಲ. ಕುಟುಂಬದ ಸದಸ್ಯರು, ಅಕ್ಕಪಕ್ಕದ ಮನೆಯವರಿಂದಲೇ ಮಕ್ಕಳು ಲೈಂಗಿಕ ಶೋಷಣೆ, ಅತ್ಯಾಚಾರಕ್ಕೆ ಒಳಗಾಗುತ್ತಿರುವುದು ವರದಿಯಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read