HomeKarnatakaBIGG NEWS : ಆ.27 ರಂದು `ಗೃಹಲಕ್ಷ್ಮಿ ಯೋಜನೆ’ ಚಾಲನಾ ಕಾರ್ಯಕ್ರಮ : ಸಿದ್ದತೆಗೆ ಮಾಡಿಕೊಳ್ಳುವಂತೆ...

BIGG NEWS : ಆ.27 ರಂದು `ಗೃಹಲಕ್ಷ್ಮಿ ಯೋಜನೆ’ ಚಾಲನಾ ಕಾರ್ಯಕ್ರಮ : ಸಿದ್ದತೆಗೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು :  ಮಹಿಳೆಯರ ಆರ್ಥಿಕ ಸಬಲೀಕರಣ ಧ್ಯೇಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಮಾನ್ಯ ಮುಖ್ಯಮಂತ್ರಿಗಳು ಆ.27 ರಂದು ಬೆಳಗಾವಿಯಲ್ಲಿ ಚಾಲನೆ ನೀಡುತ್ತಿದ್ದು, ಏಕಕಾಲದಲ್ಲಿ ಎಲ್ಲ ಗ್ರಾ.ಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

  ಆ.27 ರಂದು ಬೆಳಗಾವಿಯಿಂದ ಮಾನ್ಯ ಮುಖ್ಯಮಂತ್ರಿಗಳು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನ ಹಾಗೂ ನಗರ ಸ್ಥಳೀಯ ಸಂಸ್ಥೆ ವಾರ್ಡ್‍ಗಳಲ್ಲಿ ಈ ಕಾರ್ಯಕ್ರಮವನ್ನು ಏಕ ಕಾಲದಲ್ಲಿ ಹಮ್ಮಿಕೊಳ್ಳಲಾಗುವುದು. ಹಾಗೂ ಬೆಳಗಾವಿ ಕಾರ್ಯಕ್ರಮದ ನೇರ ಪ್ರಸಾರವನ್ನು ಎಲ್ಲ ಗ್ರಾ.ಪಂ, ಸ್ಥಳೀಯ ಸಂಸ್ಥೆಗಳಲ್ಲಿ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಆದ್ದರಿಂದ ಗ್ರಾಮ ಪಂಚಾಯ್ತಿ ಹಾಗೂ ಸ್ಥಳೀಯ ಸಂಸ್ಥೆಗಳ ವಾರ್ಡುಗಳಲ್ಲಿ ಬೆಳಗಾವಿ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಅಗತ್ಯವಾದ ಎಲ್‍ಇಡಿ ಪರದೆ ಅಥವಾ ಒಂದು ಟಿವಿ ವ್ಯವಸ್ಥೆ ಮಾಡಿಕೊಳ್ಳಬೇಕು. ಫಲಾನುಭವಿಗಳು ಮತ್ತು ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಸೇರಿಸಿ, ಸರ್ಕಾರಿ ಕಟ್ಟಡಗಳು ಅಥವಾ ಸಭಾ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಈ ಸಮಾರಂಭಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳು ಸೇರಿಂದತೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಲಾಗಿದೆ.

 ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾ.ಪಂ ಗಳಲ್ಲಿ, ಮಹಾನಗರಪಾಲಿಕೆ ಹಾಗೂ ನಗರಸಭೆಗಳಲ್ಲಿ ಪ್ರತಿ ವಾರ್ಡುಗಳು ಹಾಗೂ ಪುರ ಸಭೆಗಳಲ್ಲಿ ಫಲಾನುಭವಿಗಳ ಸಂಖ್ಯೆಗನುಗುಣವಾಗಿ 3 ರಿಂದ 4 ವಾರ್ಡುಗಳಲ್ಲಿ ಕಾರ್ಯಕ್ರಮ ಆಯೋಜನೆಗೆ ಕ್ರಮ ವಹಿಸಬೇಕು. ಹಾಗೂ ಮಳೆಗಾಲವಾದ್ದರಿಂದ ಈ ಅಂಶವನ್ನು ಗಮನದಲ್ಲಿರಿಸಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular