
ಇಂದು ಬೆಳಗ್ಗೆ ಹಾಸ್ಟೆಲ್ ನಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಡ್ಲಿ, ಸಾಂಬಾರ್ ಸೇವಿಸಿದ್ದರು. ಬಳಿಕ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಕೆಲವರನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲವು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲೇ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ, ತಿಂಡಿ ತಿಂದ ಕೆಲವೇ ಕ್ಷಣಗಳಲ್ಲಿ ಮಕ್ಕಳಿಗೆ ವಾಂತಿ, ಸುಸ್ತು ಕಾಣಿಸಿಕೊಂಡಿದೆ.

